ಉಡುಪಿ, ಆ.27: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯಲ್ಲಿ ಫ್ರೆಶರ್ಸ್ ಡೇ – ಇಗ್ನೈಟ್ 4.0 ಕಾರ್ಯಕ್ರಮ ಬುಧವಾರ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಕಾಲೇಜಿನ ಪ್ರಾಚಾರ್ಯರಾದ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಅವರು ನೂತನ ವಿದ್ಯಾರ್ಥಿಗಳನ್ನು ಕಾಲೇಜಿಗೆ ಆತ್ಮೀಯವಾಗಿ ಸ್ವಾಗತಿಸಿ, ಕಾಲೇಜಿನ ಶೈಕ್ಷಣಿಕ ವಾತಾವರಣದ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಹಾರೈಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಉಪಪ್ರಾಂಶುಪಾಲರಾದ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ, ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ದ್ವಿತೀಯ ಬಿಸಿಎ ವಿದ್ಯಾರ್ಥಿನಿ ತನ್ವಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಲಾವಣ್ಯ ಸ್ವಾಗತಿಸಿದರು. ದ್ವಿತೀಯ ಬಿಬಿಎ ವಿದ್ಯಾರ್ಥಿ ಸುನಾಗ್ ಶೆಟ್ಟಿ ವಂದನಾರ್ಪಣೆ ನೆರವೇರಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಮಿಥಾಲಿ ಪೈ ಕಾರ್ಯಕ್ರಮ ನಿರೂಪಿಸಿದರು.




By
ForthFocus™