Friday, August 28, 2026
Friday, August 28, 2026

ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ

ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ

Date:

ಉಡುಪಿ, ಆ.27: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಹಠಾತ್ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ (Nepal Flash Floods) ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಅವರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾಡಳಿತದಿಂದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನೇಪಾಳದಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಬಾಧಿತರ ವಿವರಗಳನ್ನು ತಕ್ಷಣವೇ ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ಮಾಹಿತಿ ಒದಗಿಸುವ ವಿಧಾನ: ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರವಾದ ಸ್ಥಳ, ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ತುರ್ತು ಅಗತ್ಯಗಳ ವಿವರಗಳನ್ನು ಶುಲ್ಕ ರಹಿತ ಸಂಖ್ಯೆ: 1077, ದೂ.ಸಂಖ್ಯೆ: 0820-2574802 ಅಥವಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ಬಿಡುಗಡೆ ಮಾಡಲಾದ ಗೂಗಲ್ ಫಾರ್ಮ್ ಲಿಂಕ್ https://docs.google.com/forms/d/1gnw8B8vaYknr0Y2Lkn_fpWubPnKI6a8C4Em7co1Shbk/edit ನಲ್ಲಿಯೂ ವಿವರಗಳನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 359ಕ್ಕೆ ಏರಿಕೆ, 1300 ಕ್ಕೂ ಹೆಚ್ಚು ಜನರು ನಾಪತ್ತೆ

ಯು.ಬಿ.ಎನ್.ಡಿ., ಆ.27: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ...

ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ

ಕುಂದಾಪುರ, ಆ.27: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!