Saturday, August 29, 2026
Saturday, August 29, 2026

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

Date:

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು, ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಸಾನಿಧ್ಯದಲ್ಲಿ ಜರಗಿತು. ಉಡುಪಿ ಶಾಸಕ ಟ್ರಸ್ಟ್ ನ ಅಧ್ಯಕ್ಷರೂ ಆದ ಯಶ್ಪಾಲ್ ಎ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಯ ಬಳಿಕ ಕಾರ್ಯದರ್ಶಿ ಮುರಲಿ ಕಡೆಕಾರ್ ಟ್ರಸ್ಟ್ ನ ಕಾರ್ಯಚಟುವಟಿಕೆಗಳನ್ನು ಸಭೆಯ ಗಮನಕ್ಕೆ ತಂದರು. ಉಡುಪಿ, ಕಾಪು, ಕುಂದಾಪುರ, ಬೈಂದೂರು ಈ ನಾಲ್ಕು ವಿಧಾನಸಭಾ ಕ್ಷೇತ್ರದ 99 ಪ್ರೌಢಶಾಲೆಗಳ ಯಕ್ಷಗಾನ ಪ್ರದರ್ಶನ ನವಂಬರ್ 16 ರಿಂದ ಆರಂಭಗೊಂಡು ಡಿಸೆಂಬರ್ ಅಂತ್ಯದವರೆಗೆ ಜರುಗಲಿದೆ ಎಂದು ತಿಳಿಸಿದರು.

ಪರ್ಯಾಯ ಶ್ರೀಗಳ ಮತ್ತು ನಾಲ್ವರು ಶಾಸಕರ ಪೂರ್ಣ ಸಹಕಾರದಿಂದ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗಿ ಜರುಗುತ್ತಿದೆ. ಅಂತಯೇ ಎಲ್ಲ ದಾನಿಗಳ ಹಾಗೂ ಯಕ್ಷಗಾನ ಗುರುಗಳ ಪೂರ್ಣ ಸಹಕಾರವನ್ನು ಕೃತಜ್ಞತೆಯಿಂದ ಸ್ಮರಿಸಿಕೊಳ್ಳಲಾಯಿತು. ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಪರ್ಯಾಯ ಮಠದ ದಿವಾನರು, ಟ್ರಸ್ಟ್ ನ ಉಪಾಧ್ಯಕ್ಷರು ಆದ ಡಾ.ಉದಯ ಕುಮಾರ್ ಸರಳತ್ತಾಯರು ಉಪಸ್ಥಿತರಿದ್ದರು. ಟ್ರಸ್ಟ್ ನ ವಿಶ್ವಸ್ಥರುಗಳಾದ ಎಂ.ಗಂಗಾಧರ ರಾವ್, ನಾರಾಯಣ ಎಂ.ಹೆಗಡೆ, ವಿ.ಜಿ. ಶೆಟ್ಟಿ, ಗಣೇಶ ಬ್ರಹ್ಮಾವರ, ವಿದ್ಯಾಪ್ರಸಾದ್, ಪ್ರಭಾಕರ ಭಂಡಿ, ನಾಗರಾಜ ಹೆಗಡೆ, ಉಮೇಶ ಭಟ್ ಹಾಗೂ ದಾನಿಗಳಾದ ಸುದರ್ಶನ ಮೂರ್ತಿ ದಂಪತಿಗಳು ಸಭೆಯಲ್ಲಿ ಭಾಗವಹಿಸಿದರು. ಯಕ್ಷಗಾನ ಗುರುಗಳು, ಪ್ರಸಾಧನ ತಜ್ಞರು ಆದ ಕೃಷ್ಣಸ್ವಾಮಿ ಜೋಶಿಯವರ ಸೇವೆಯನ್ನು ಸ್ಮರಿಸಿಕೊಂಡು ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 359ಕ್ಕೆ ಏರಿಕೆ, 1300 ಕ್ಕೂ ಹೆಚ್ಚು ಜನರು ನಾಪತ್ತೆ

ಯು.ಬಿ.ಎನ್.ಡಿ., ಆ.27: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ...
error: Content is protected !!