Saturday, October 17, 2026
Saturday, October 17, 2026

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

Date:

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ ಹೆಗ್ಡೆ ಮಾರಾಳಿ, ವೈದ್ಯಾಧಿಕಾರಿ ಡಾ ಸವಿತಾ ಕುಂದರ್, ಸ್ಥಳೀಯ ಮುಖಂಡರಾದ ಆದರ್ಶ್ ಶೆಟ್ಟಿ ಕೆಂಜೂರು, ದಿನೇಶ ಶೆಟ್ಟಿ, ರಮಾನಂದ ಶೆಟ್ಟಿ, ನಾಗೇಶ ನಾಯಕ್, ಉಷಾ ಪೂಜಾರಿ, ಮನೋಜ ಕುಮಾರ್, ಹರೀಶ ಶೆಟ್ಟಿ, ರವಿಂದ್ರ ಪೂಜಾರಿ, ಉದಯ ಶೆಟ್ಟಿ, ಶಾಂತರಾಜ ಶೆಟ್ಟಿ, ನವೀನ ಚಂದ್ರ ಶೆಟ್ಟಿ, ನವೀನ ಪುತ್ರನ್, ರಘರಾಮ ಶೆಟ್ಟಿ, ಸತೀಶ್ ಶೆಟ್ಟಿ, ಶ್ರೀಕಾಂತ ಆಚಾರ್ಯ, ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!