Wednesday, September 23, 2026
Wednesday, September 23, 2026

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Date:

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಅವರ ಜೀವನದ ಸಾಧನೆಗಳನ್ನು ಯುವ ಕ್ರೀಡಾಪಟುಗಳಿಗೆ ತಿಳಿಸುವ ಉದ್ದೇಶದಿಂದ ಈ ದಿನವನ್ನು ರಾಷ್ಟ್ರಾದ್ಯಂತ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ ಯುವ ಕ್ರೀಡಾಳುಗಳು ಮೇಜರ್ ಧ್ಯಾನ್‌ಚಂದ್ ಅವರ ಸಾಧನೆಯಿಂದ ಸ್ಫೂರ್ತಿ ಪಡೆದು ಒಲಂಪಿಕ್‌ನಲ್ಲಿ ಸ್ವರ್ಣ ಪದಕಗಳನ್ನು ಗೆದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಐಕ್ಯೂಎಸಿ ಕ್ರೀಡಾ ವಿಭಾಗ ರಾಷ್ಟ್ರೀಯ ಸೇವಾ ಯೋಜನೆ ಯುವ ರೆಡ್ ಕ್ರಾಸ್ ಘಟಕ ರೋವರ್ ಮತ್ತು ರೇಂಜರ್ ಘಟಕ ಹಳೆ ವಿದ್ಯಾರ್ಥಿ ಸಂಘ ಲಯನ್ಸ್ ಕ್ಲಬ್ ಉಡುಪಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಮತ್ತು ಕುಂದಾಪುರ ಗೃಹ ರಕ್ಷಕ ದಳ ಮತ್ತು ಪೌರಾರಕ್ಷಣಾ ದಳ ಉಡುಪಿ ಇವರ ಸಹಯೋಗದಲ್ಲಿ ತೆಂಕನಿಡಿಯೂರು ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಕಳೆದೊಂದು ದಶಕದಲ್ಲಿ ಕೇಂದ್ರ ಸರ್ಕಾರವು ಕ್ರೀಡೆಗೆ ಅತಿ ಹೆಚ್ಚಿನ ಮಹತ್ವ ನೀಡುತ್ತಿದ್ದು, ಖೇಲೋ ಇಂಡಿಯಾ ಕಾರ್ಯಕ್ರಮದ ಮೂಲಕ ದೇಶದ ಮೂಲೆ ಮೂಲೆಯಲ್ಲಿರುವ ಕ್ರೀಡಾಪಟುಗಳನ್ನು ಗುರುತಿಸಿ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹ ನೀಡುವ ಕಾರ್ಯವನ್ನು ನಡೆಸುತ್ತಿದೆ. ಖೇಲೆಗಾ ಭಾರತ್ ಜಿತೇಗಾ ಭಾರತ್ ಏಕ್ ಘಂಟ ಖೇಲ್ ಕೇ ಮೆದಾನ್ಮೆ ಕಾರ್ಯಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ದಿನದ ಒಂದು ಗಂಟೆಯನ್ನು ಕ್ರೀಡೆಗಾಗಿ ಮೀಸಲಿಟ್ಟು ಜಿಲ್ಲೆಯ ಕ್ರೀಡಾಳುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ಸಾಧನೆ ಮಾಡಲು ಇದು ಸಹಕಾರಿಯಾಗಲಿದೆ ಎಂದ ಅವರು ಉತ್ತರ ಪ್ರದೇಶದ ಮೀರತ್ ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ
ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದ್ದು ಪ್ರಪ್ರಥಮ ಬಾರಿಗೆ ಕ್ರೀಡೆಯಲ್ಲಿ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆಯುವ ಅವಕಾಶವನ್ನು ನೀಡಲಾಗಿದೆ. ಕ್ರೀಡೆಯಲ್ಲಿ ಇಂದು ವಿಪುಲ ಅವಕಾಶಗಳಿದ್ದು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಅತ್ಯುನ್ನತ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಬಹುದು ಎಂದರು. ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೊತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ ಫಿಟ್ ಇಂಡಿಯಾ
ಪ್ರತಿಜ್ಞಾವಿಧಿ ಬೋಧಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಕಾರ್ಯದರ್ಶಿ ಗಣನಾಥ್ ಶೆಟ್ಟಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಅಧ್ಯಕ್ಷ ಡಾ. ಜಯಕರ್ ಶೆಟ್ಟಿ, ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡೆಂಟ್ ರಾಜೇಶ್ ಕೆ ಸಿ, ಹೋಂ ಗಾರ್ಡ್ ಇನ್ಸ್ಪೆಕ್ಟರ್ ಬಸವರಾಜ್, ರೆಡ್‌ಕ್ರಾಸ್ ಖಜಾಂಜಿ ಶಿವರಾಮ್ ಶೆಟ್ಟಿ, ರೇಂಜರ್ಸ್ ಘಟಕದ ಸುಷ್ಮಾ ಟಿ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ ಮತ್ತಿತರರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ರೋವರ್ಸ್ ಮತ್ತು ರೇಂಜರ್ಸ್ನ ಸಂಚಾಲಕ ಮೆರ್ವಿನ್ ವಿಕ್ಟರ್ ಡಿಸೋಜಾ ವಂದಿಸಿ, ಎನ್.ಎಸ್.ಎಸ್ ಅಧಿಕಾರಿ ಬಾಲರಾಜ್ ಡಿಬಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!