ಉಡುಪಿ, ಆ.31: ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ- ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcw ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30. ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ bcwdhelpline@gmail.com ಹಾಗೂ ಹೆಚ್ಚಿನ ವಿವರಗಳಿಗಾಗಿ https://bcwd.karnataka.gov.in ಅನ್ನು ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
Date:




By
ForthFocus™