Saturday, October 17, 2026
Saturday, October 17, 2026

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Date:

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 13 ರಂದು ನಡೆಯಲಿದ್ದು, ಭಾಗವಹಿಸುವ ಕ್ರೀಡಾಪಟುಗಳು https://www.dasaracmcup.in ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ: ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, 10000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100ಮೀ ರಿಲೇ, 4*400 ಮೀ.ರಿಲೇ). ಗುಂಪು ಆಟಗಳು: ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ ಬಾಲ್, ಥ್ರೋ ಬಾಲ್ ಮಹಿಳೆಯರಿಗೆ: ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100ಮೀ ರಿಲೇ, 4*400 ಮೀ.ರಿಲೇ) ಗುಂಪು ಆಟಗಳು: ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಸೆ. 12 ರಂದು ಫುಟ್‌ಬಾಲ್ ಸ್ಪರ್ಧೆಗಳನ್ನು ಎಂ.ಜೆ.ಸಿ ಕ್ರೀಡಾಂಗಣದಲ್ಲಿ ಹಾಗೂ ಸೆ. 13 ರಂದು ಖೋ-ಖೋ ಸ್ಪರ್ಧೆಗಳನ್ನು ಸ.ಪ.ಪೂ. ಕಾಲೇಜು ಬ್ರಹ್ಮಾವರದಲ್ಲಿ ನಡೆಸಲಾಗುವುದು. ಭಾಗವಹಿಸುವ ಸ್ಪರ್ಧಿಗಳು ಕ್ರೀಡಾಕೂಟ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ವಸಂತ ಜೋಗಿ, ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ದೂ.ಸಂ: 9880655125 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!