Tuesday, September 1, 2026
Tuesday, September 1, 2026

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ರಾಷ್ಟ್ರೀಯ ಕ್ರೀಡಾ ದಿನಾಚರಣೆ

Date:

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಅಥ್ಲೆಟಿಕ್ಸ್‌ ಆಟಗಾರ್ತಿ ಕರಿಶ್ಮಾ ಶ್ರೀಕಾಂತ್‌ ಆಗಮಿಸಿದ್ದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯನ್ನು ಹೊಂದಬೇಕು. ಕ್ರೀಡೆಯನ್ನು ತಮ್ಮ ಜೀವನದಲ್ಲಿ ಆಳವಡಿಸುವುದರಿಂದ ಅವರಲ್ಲಿ ಆತ್ಮಸ್ಥೆರ್ಯ, ಆತ್ಮವಿಶ್ವಾಸ, ಹೆಚ್ಚಾಗುತ್ತದೆ. ಸೋಲು ಗೆಲುವುವನ್ನು ಸಮಾನವಾಗಿ ತೆಗೆದುಕೊಂಡು ಹೋಗುವಂತೆ ದೃಢವಿಶ್ವಾಸ ಬೆಳೆಯುತ್ತದೆ. ಎಂದು ಅವರು ಹೇಳಿದರು.

ಪ್ರಾಂಶುಪಾಲರಾದ ಪ್ರೊ. ಗಾಂವ್ಕರ್‌ ಗೋಪಾಲಕೃಷ್ಣ ಎಂ. ಇವರು ಮಾತನಾಡಿ ಮೇಜರ್‌ ಧ್ಯಾನ್‌ ಚಂದ್‌ ಇವರ ಹಾಕಿ ಆಟ ನಮಗೆಲ್ಲರಿಗೂ ಸ್ಪೂರ್ತಿ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸುವುದರಿಂದ ಆರೋಗ್ಯವನ್ನು ಹಾಗೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು. ಐಕ್ಯೂಎಸಿ ಸಂಚಾಲಕರಾದ ಡಾ. ರೋಶ್ನಿ ಯಶವಂತ್‌, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸವಿತಾ ಸ್ವಾಗತಿಸಿ, ನಿಧಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಪ್ರೀತಿ ವಂದಿಸಿದರು. ಬೋಧಕ ವೃಂದ, ಕಚೇರಿ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಆ. 31: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ...
error: Content is protected !!