Friday, October 16, 2026
Friday, October 16, 2026

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

Date:

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ ಅದ್ದೂರಿ ಓಣಂ ಸಂಭ್ರಮಾಚರಣೆ ಸೆಪ್ಬಂಬರ್ 6 ಭಾನುವಾರದಂದು ಅಂಬಾಗಿಲು ಬಳಿಯ ಅಮೃತ್ ಗಾರ್ಡನ್ ಸಭಾಭವನದಲ್ಲಿ ನಡೆಯಲಿದೆ ಎಂದು ಕೇರಳ ಸಮಾಜಂ ಉಡುಪಿ ಇದರ ಅಧ್ಯಕ್ಷರಾದ ಅರುಣ್ ಕುಮಾರ್ ತಿಳಿಸಿದ್ದಾರೆ.

ಕಳೆದ ಬಾರಿ ಮೊದಲ ವರ್ಷದ ಓಣಂ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಅತ್ಯದ್ಭುತ ಬೆಂಬಲ‌ ಸಿಗುವುದರ ಮೂಲಕ ಯಶಸ್ವಿಯಾಗಿ ನೆರವೇರಿತ್ತು. ಅದೇ ಯಶಸ್ವಿನ ಮುಂದುವರೆದ ಭಾಗವಾಗಿ ಈ ಬಾರಿ‌ ಅದ್ದೂರಿಯಾಗಿ ಓಣಂ ಸಂಭ್ರಮಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ‌ ಶಾಸಕರಾದ ಯಶ್ಪಾಲ್ ಸುವರ್ಣ  ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ ಕೆ., ಉಡುಪಿ‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್‌, ಮಣಿಪಾಲದ‌‌ ಕೆಎಂ‌ಸಿ ಅಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞರಾದ ಡಾ.ಶ್ಯಾಮ್ ಕೆ ಅಶೋಕ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಟ್ರಸ್ಟಿಗಳಾದ ಅಭಿಲಾಶ್ ಪಿ ವಿ. ಕೇರಳ‌ ಸಮಾಜಂ‌ ಮಂಗಳೂರು ಅಧ್ಯಕ್ಷರಾದ ಟಿ ಕೆ ರಾಜನ್, ಪ್ರಸಿದ್ದ ಮಾಲಯಾಳಂ‌ ಸಿನಿಮಾ ನಟಿಯರಾದ ಸುಚಿತ್ರ ನಾಯರ್, ನೀನಾ ಕುರುಪ್, ಪ್ರಸಿದ್ದ ಬಾಲ ಕಲಾವಿದೆ ಗಾಯಕಿ ರಾನಿಯ ರಫೀಕ್ ಭಾಗವಹಿಸಲಿದ್ದು ಕಾರ್ಯಕ್ರಮದ ಮೆರಗು ಹೆಚ್ಚಿಸಲಿದ್ದಾರೆ.

ಈ ಅದ್ದೂರಿ ಕಾರ್ಯಕ್ರಮದಲ್ಲಿ ಪೂಕಳಂ ಸ್ಪರ್ಧೆ, ಮಕ್ಕಳಿಗಾಗಿ ಓಣಂ ಆಟಗಳು, ಕೇರಳ ಸಮಾಜಂ ಸದಸ್ಯರುಗಳಿಂದ ಸಾಂಸ್ಕೃತಿಕ ಹಾಗೂ ಮನರಂಜನಾ‌ ಕಾರ್ಯಕ್ರಮಗಳು, ಕಳರಿ ಪಾಯಟ್ಟು ಪ್ರದರ್ಶನ, ಜೊತೆಗೆ ಮಧ್ಯಾಹ್ನ ಕೇರಳದ ವಿಶೇಷ “ಓಣಂ ಸಧ್ಯ” ಭೋಜನ ಕೂಟ ನಡೆಯಲಿದೆ.

ಕೇರಳದ ಸಾಂಪ್ರದಾಯಿಕ ಓಣಂ ಅಚರಣೆ, ಕಲೆ, ಸಂಸ್ಕೃತಿ, ಅಲ್ಲಿನ ಆಹಾರ ಪದ್ದತಿಗಳನ್ನು, ಕರಾವಳಿಯ ಜನರಿಗೆ ಅರಿವು ಮೂಡಿಸುವ ಉದ್ದೇಶವೂ ಈ ಕಾರ್ಯಕಮದ ಪ್ರಮುಖ ಉದ್ದೇಶವಾಗಿದೆ. ಹೀಗಾಗಿ ಉಡುಪಿಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!