Saturday, October 17, 2026
Saturday, October 17, 2026

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

Date:

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ ಇದರ ವತಿಯಿಂದ ಪ್ರಥಮ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಪಡುಕರೆಯಲ್ಲಿ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಮಕ್ಕಳಲ್ಲಿ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ವಿವಿಧ ರೀತಿಯ ಕೃಷ್ಣ ವೇಷ ಧರಿಸಿ ಗಮನ ಸೆಳೆದರು. ಮುದ್ದು ಕೃಷ್ಣನ ವಿವಿಧ ಭಂಗಿ, ಅಲಂಕಾರ ಹಾಗೂ ಅಭಿನಯದ ಮೂಲಕ ಮಕ್ಕಳು ನೆರೆದಿದ್ದವರ ಮನಸೂರೆಗೊಂಡರು.

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಪೂರ್ಣಿಮಾ ಜನಾರ್ದನ್ ಅವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಮಕ್ಕಳಲ್ಲಿ ನಮ್ಮ ನಾಡಿನ ಧಾರ್ಮಿಕ, ಸಾಂಸ್ಕೃತಿಕ ಪರಂಪರೆ ಮತ್ತು ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಇಂತಹ ಸ್ಪರ್ಧೆಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ನಡೆಯಬೇಕು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಮನ್ ಪಡುಕರೆ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಡುಕರೆ ಮಹಿಳಾ ಮಂಡಲ (ರಿ.) ಅಧ್ಯಕ್ಷೆ ಸುಶೀಲ ಜಗನ್ನಾಥ, ಮಲ್ಪೆಯ ಉದ್ಯಮಿಗಳಾದ ಅಶೋಕ್ ಮೆಂಡನ್ ಹಾಗೂ ಸಂದೀಪ್ ಕಡೆಕಾರ್ ಉಪಸ್ಥಿತರಿದ್ದರು.

ಪುಟಾಣಿಗಳ ಕೃಷ್ಣ ವೇಷ, ಅವರ ಮುಗ್ಧ ಅಭಿನಯ ಹಾಗೂ ಸಂಭ್ರಮದ ವಾತಾವರಣ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಪೋಷಕರು, ಗಣ್ಯರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!