Friday, September 25, 2026
Friday, September 25, 2026

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೊಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲುತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರಿಗೆ ರೂ.3000 (ಕೇಂದ್ರದ ಪಾಲು ರೂ.1500 ಹಾಗೂ ರಾಜ್ಯದ ಪಾಲು ರೂ.1500) ಹಾಗೂ ಗರಿಷ್ಠ 2 ಹೆಕ್ಟೇರ್‌ಗಳಿಗೆ ರೂ.6000 ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು, ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್.ಟಿ.ಸಿ., ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ
ಪರಿಗಣಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಯುರ್ವೇದ ಜೀವನದ ಪದ್ದತಿಯಾದಾಗ ಬದುಕು ಸುಂದರ: ಎಂ.ಎ. ಗಫೂರ್

ಉಡುಪಿ, ಸೆ.25: ಆಯುರ್ವೇದ ಕೇವಲ ಒಂದು ವೈದ್ಯಕೀಯ ಪದ್ಧತಿಯಲ್ಲ, ಅದು ಜೀವನ...

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!