Sunday, October 18, 2026
Sunday, October 18, 2026

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

Date:

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಾವುಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದ ಬಾಲಕರ ವಿಭಾಗ ಮತ್ತು ಬಾಲಕಿಯರ ವಿಭಾಗದ ಎರಡೂ ವಿಭಾಗಗಳಲ್ಲಿಸರಕಾರಿ ಪದವಿಪೂರ್ವ ಕಾಲೇಜು ನಾವುಂದದ ಬಾಲಕರ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿವೆ. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ಮೊಹಮದ್ ಇಲಿಯಾಸ್ ಇವರು ಅತಿಥಿಗಳಾಗಿದ್ದರು. ಉಪನ್ಯಾಸಕರದ ಶ್ರೀಲಕ್ಷ್ಮಿ ಕೆ. ಎಸ್ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!