Monday, September 28, 2026
Monday, September 28, 2026

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

Date:

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ. ಪಾರ್ವತಿ ಐತಾಳರ ಕಥೆಗಳು ನೋಟಕ್ಕೆ ಸರಳವಾಗಿ ಕಂಡರೂ ಅವುಗಳಲ್ಲಿ ಬದುಕಿನ ಬಗೆಗಿನ ಗಂಭೀರ ಹಾಗೂ ಸೂಕ್ಷ್ಮ ಒಳನೋಟಗಳಿರುವ ಸತ್ಯವನ್ನು ಅಲ್ಲಗಳೆಯುವ ಹಾಗಿಲ್ಲ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು. ಇಲ್ಲಿನ ಜನಪ್ರತಿನಿಧಿ ಪತ್ರಿಕಾ ಕಚೇರಿಯಲ್ಲಿ ನಡೆದ ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ‘ಘಾತ’ ಕಥಾಸಂಕಲನದ ಕುರಿತು ಅವರು ಮಾತನಾಡಿದರು. ಲೇಖಕಿ-ಉಪನ್ಯಾಸಕಿ ಸುಮತಿ ಶೆಣೈಯವರು ಪಾರ್ವತಿ ಐತಾಳರ ‘ಮಲೆಯಾಳ ಸಾಹಿತ್ಯದ ಆರಂಭ ಕಾಲ’ ಎಂಬ ಇನ್ನೊಂದು ಕೃತಿಯ ಬಗ್ಗೆ ಮಾತನಾಡಿ, ಯಾವುದೇ ಸಾಹಿತ್ಯದ ಬೆಳವಣಿಗೆಗೆ ಓದುಗರು ಇತರ ಭಾಷೆಯ ಕೃತಿಗಳನ್ನು ಓದುವುದು ಮಾತ್ರವಲ್ಲದೆ ಆ ಭಾಷೆಯ ಸಾಹಿತ್ಯವು ನಡೆದು ಬಂದ ದಾರಿ ಹಾಗೂ ಅದರ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಈ ದೃಷ್ಟಿಯಿಂದ ಮಲೆಯಾಳ ಸಾಹಿತ್ಯದ ಚರಿತ್ರೆಯ ಒಳನೋಟವನ್ನು ನೀಡುವ ಈ ಕೃತಿ ಅತ್ಯಂತ ಮಹತ್ವದ್ದಾಗಿದೆ’ ಎಂದರು.

ಆರಂಭದಲ್ಲಿ ಕೃತಿಗಳ ಕರ್ತೃ ಪಾರ್ವತಿ ಜಿ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಪ್ರತಿನಿಧಿ ಪತ್ರಿಕೆಯ ಸಂಪಾದಕರಾದ ಸುಬ್ರಹ್ಮಣ್ಯ ಪಡುಕೋಣೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ವಿಮಲಾ ನಾವುಡ ಉಪಸ್ಥಿತರಿದ್ದರು. ಸುಮನಾ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಜೆಸ್ಸಿ ಎಲಿಝಬೆತ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!