Monday, September 28, 2026
Monday, September 28, 2026

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

Date:

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ್‌ ಎಚ್, ಮಣಿಪಾಲ ಪದವಿಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಇಂದಿರಾ ರಾವ್‌, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಮತ್ತು ಪರ್ಕಳ ಪ್ರೌಢಶಾಲೆ ಪರ್ಕಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಆನಂದ ನಾಯ್ಕ್‌ ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರ ಪ್ರಶಸ್ತಿ ವಿಜೇತ ಉಪನ್ಯಾಸಕರಾದ ಸುರೇಶ್‌ ಮರಕಾಲ ಇವರನ್ನೂ ಸನ್ಮಾನಿಸಲಾಯಿತು. ಸನ್ಮಾನಿತರಾದ ಚಂದ್ರ ನಾಯ್ಕ್‌ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕಷ್ಟವನ್ನು ಮೀರಿ ನಿಂತಾಗ ಸಾಧನೆ ಸಾಧ್ಯ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪೃವೃತ್ತರಾಗಲಿ ಎಂದು ಶುಭ ಹಾರೈಸಿದರು . ಸ.ಹಿ.ಪ್ರಾ.ಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ ಮಾತನಾಡಿ ವಿದ್ಯಾರ್ಥಿಗಳು ಸಂಪಾದನೆಯ ಜೊತೆಗೆ ಮೌಲ್ಯಗಳನ್ನು ಅಳವಡಿಸಿ ಭವಿಷ್ಯದ ಉತ್ತಮ ಪ್ರಜೆಗಳಾಗಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುರೇಶ್‌ ಮರಕಾಲ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಾನು ಬೆಳೆದು ಬಂದ ಹಾದಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು. ತಪ್ಪು ಮಾಡಿದವರನ್ನು ತಿದ್ದುವ ಕಾಯಕಕ್ಕಿಂತ ತಪ್ಪೇ ಮಾಡದ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಂಡು ಶಿಕ್ಷಕನಾಗುವ ಘನತೆ ದೊಡ್ಡದು.ಪ್ರತೀ ಸಾಧನೆಯ ಹಿಂದೆ ಗುರುವಿನ ಪರಿಶ್ರಮವಿದೆ ಎನ್ನುವುದನ್ನು ವಿದ್ಯಾರ್ಥಿಗಳು ಮರೆಯಬಾರದು. ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡುವ ಜ್ಞಾನಸುಧಾದ ಕಾರ್ಯ ನಿರಂತರವಾಗಿ ಸಾಗಲಿ ಎಂದು ಶುಭ ಹಾರೈಸಿದರು. ಅಜೆಕಾರು ಪದ್ಮಗೋಪಾಲ ಎಜ್ಯಕೇಶನ್‌ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ ಸ್ವಾಗತಿಸಿ, ಕನ್ನಡ ಉಪನ್ಯಾಸಕಿಯಾದ ಕು.ಮಂಜುಳ ಕಾರ್ಯಕ್ರಮ ನಿರ್ವಹಿಸಿದರು. ಉಪಪ್ರಾಂಶುಪಾಲರಾದ ರವಿ ಜಿ., ಹೇಮಂತ,ನವೀನ್‌ ಎ, ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!