Tuesday, September 8, 2026
Tuesday, September 8, 2026

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Date:

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೆಪ್ಟೆಂಬರ್ 4 ರಂದು ಕಟಪಾಡಿಯ ಎಸ್.ವಿ. ಎಸ್. ಪದವಿ ಪೂರ್ವ, ಕಾಲೇಜಿನಲ್ಲಿ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ತ್ರಿಶಾ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಸಿ.ಎ.ಗೋಪಾಲಕೃಷ್ಣ ಭಟ್ ಅವರು ಇಂತಹ ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುದಲ್ಲದೇ ಮಾನಸಿಕವಾಗಿ ಸಧೃಢರಾಗಿಸುತ್ತದೆ, ಜಯಗಳಿಸಿದ ತಂಡಗಳು ಜಿಲ್ಲೆ, ರಾಜ್ಯಮಟ್ಟದಲ್ಲಿ ಪ್ರತಿನಿಧಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್.ವಿ. ಎಸ್.ವಿದ್ಯಾವರ್ಧಕ ಸಂಘದ ಆಡಳಿತ ಅಧಿಕಾರಿ ಶ್ರೀ ಸುಧಾಕರ್ ಬ್ರಹ್ಮಾವರ, ದೈಹಿಕ ಶಿಕ್ಷಕ ಶಶಿಕಿರಣ್ ಉಪಸ್ಥಿತರಿದ್ದರು. ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಪ್ರಸಾದ್ ಸ್ವಾಗತಿಸಿ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ ಪೈ ವಂದಿಸಿದರು. ಉಪನ್ಯಾಸಕರಾದ ಧೀರಜ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಬಾಲಕರ ವಿಭಾಗದಲ್ಲಿ ಹಿಂದೂ ಪ.ಪೂ. ಕಾಲೇಜು, ಶಿರ್ವ ಪ್ರಥಮ ಹಾಗೂ ಸೈಂಟ್ ಮೇರಿಸ್ ಪ.ಪೂ. ಕಾಲೇಜು, ಶಿರ್ವ ದ್ವಿತೀಯ. ಬಾಲಕಿಯರ ವಿಭಾಗದಲ್ಲಿ ಸೈಂಟ್ ಜೋಸ್ಸ್ ಪ.ಪೂ. ಕಾಲೇಜು, ಶಂಕರಪುರ ಪ್ರಥಮ ಹಾಗೂ ಹಿಂದೂ ಪ.ಪೂ. ಕಾಲೇಜು, ಶಿರ್ವ ದ್ವಿತೀಯ ಸ್ಥಾನಗಳನ್ನು ಗಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....
error: Content is protected !!