ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ ಎನ್ನುವುದರ ಬಗ್ಗೆ ನಮ್ಮಲ್ಲಿ ಮೂಲಭೂತ ಮಾಹಿತಿಗಳು ಇರಬೇಕು ಮತ್ತು ಆ ಮೂಲಕ ಪರಿಸರವನ್ನು ರಕ್ಷಿಸುವಲ್ಲಿ ನಾವುಗಳು ಒಂದಾಗಿ ಕೈಜೋಡಿಸಬೇಕು ಎಂದು ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ ಉಡುಪಿಯ ಸೂಪರ್ವೈಸರ್ ಸರೋಜಾ ಎಸ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ ನ ಸೂರಜ್. ಕೆ ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಉಪಸ್ಥಿತರಿದ್ದರು. ಎಸ್.ವಿ ಕಾಮರ್ಸ್ ಕ್ಲಬ್ ಸಂಯೋಜಕರಾದ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸ್ನೇಹಾ ಖಾರ್ವಿ ಸ್ವಾಗತಿಸಿ, ತನ್ವಿ ವಂದಿಸಿದರು.
ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ
ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ
Date:




By
ForthFocus™