Friday, October 2, 2026
Friday, October 2, 2026

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ; ಶೈಕ್ಷಣಿಕ ಸಾಧಕರಿಗೆ ಗೌರವ

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ; ಶೈಕ್ಷಣಿಕ ಸಾಧಕರಿಗೆ ಗೌರವ

Date:

ಉಡುಪಿ, ಸೆ.10: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಹುಆಯ್ಕೆಯ ಗೊಂದಲವಿರುವುದರಿಂದ ಸರಿಯಾದ ವೃತ್ತಿಮಾರ್ಗದರ್ಶನದ ಅವಶ್ಯಕತೆಯಿದೆ. ಇದನ್ನು ಮನಗಂಡಿರುವ ಮಾಹೆಯು ‘ಕೆರಿಯರ್ ಕೌನ್ಸಿಲ್ ಪೋರ್ಟಲ್’ ಎಂಬುದನ್ನು ಆರಂಭಿಸುವ ತಯಾರಿಯಲ್ಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣದಲ್ಲಿ ಪದವಿಪೂರ್ವ ಶಿಕ್ಷಣ ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಕಾರ್ಯನಿರ್ವಹಿಸುತ್ತಿರುವ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘದ ಕಾರ್ಯ ಶ್ಲಾಘನೀಯ ಎಂದು ಮಾಹೆಯ ಪ್ರಿನ್ಸಿಪಾಲ್ ಆಫಿಸರ್ ಡಾ. ಆದಿತ್ಯ ಮೋಹನ್ ಜಾಧವ್ ಹೇಳಿದರು. ಅವರು ಮಾಹೆ ಮಣಿಪಾಲದಲ್ಲಿ ಸಪ್ಟೆಂಬರ್ ೭ ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ, ನಿವೃತ್ತ ಪ್ರಾಂಶುಪಾಲರುಗಳಿಗೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಮಾಹೆಯ ಡೈರೆಕ್ಟರ್ ಪ್ರೊ. ಚಂದ್ರಕಲಾ ಮಾತನಾಡಿ, ಪ್ರಸ್ತುತ ವಿದ್ಯಾಮಾನಗಳಾದ ವಿಜ್ಞಾನ ಹಾಗೂ ತಂತ್ರಜ್ಞಾನಗಳ ಮಾಹಿತಿಯನ್ನು ಪಡೆದು ಮಕ್ಕಳಿಗೆ ಅದನ್ನು ವರ್ಗಾಯಿಸುವಲ್ಲಿ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಪಾತ್ರ ಬಹು ಮಹತ್ವದ್ದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಹೆಯ ಪ್ರೊ. ಮಹೇಶ್ ಪ್ರಭುರವರು, ಎಂ.ಐ.ಟಿಯಲ್ಲಿ ಸಿಗುವ ವಿವಿಧ ವಿದ್ಯಾರ್ಥಿ ವೇತನದ ಸೌಲಭ್ಯಗಳ ಕುರಿತ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಉಪನಿರ್ದೇಶಕರಾದ ಶ್ರೀ ರವೀಂದ್ರ ಉಪಾಧ್ಯ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಗುರುತರವಾದದ್ದು. ಇದಕ್ಕೆ ಸಾಕ್ಷಿ ಎಂಬಂತೆ 27 ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಿದ ಸಂಘದ ಕಾರ್ಯ ಪ್ರಶಂಸನೀಯ ಎಂದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ.ದಯಾನಂದ್ ಪೈ ಅಧ್ಯಕ್ಷತೆ ವಹಿಸಿ, ಸತತ ಮೂರು ವರ್ಷದ ಸಂಘದ ವಾರ್ಷಿಕ ಸಭೆಯನ್ನು ನಡೆಸಿಕೊಟ್ಟ ಮಾಹೆಯ ಟಾಪ್ಮಿ ಹಾಗೂ ಡಬ್ಲು.ಜಿ.ಎಸ್.ಎಚ್.ಎ ಸಂಸ್ಥೆಗಳಿಗೆ ಸಂಘದ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು. ಜಿಲ್ಲೆಯು ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯಕ್ಕೆ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನಿಯಾಗಿ ಮೂಡಿಬರಲು ಶ್ರಮಿಸಿದ ಎಲ್ಲಾ ಪ್ರಾಂಶುಪಾಲರನ್ನು ಅಭಿನಂದಿಸಿ, ಜಿಲ್ಲಾಡಳಿತ ಮತ್ತು ಉಪನಿರ್ದೇಶಕರ ಮಾರ್ಗದರ್ಶನವನ್ನು ಸ್ಮರಿಸಿದರು.

ಪ್ರಾಂಶುಪಾಲರ ಸಂಘವು ಪ್ರತೀ ವರ್ಷದಂತೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲಿದೆ ಎಂದರು. ಕಾರ್ಯಕ್ರಮದಲ್ಲಿ ನಿವೃತ್ತರಾದ ಪ್ರಾಂಶುಪಾಲರಾದ, ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಡಾ.ಪ್ರಕಾಶ್ ಶೆಣೈ ಮಂದಾರ್ತಿಯ ಎಸ್.ಡಿ.ಪಿ.ಟಿ ಪ.ಪೂ. ಕಾಲೇಜಿನ ಶ್ರೀ ಪ್ರವೀಣ್ ಶೆಟ್ಟಿ ಹಾಗೂ ಶಿರ್ವದ ಹಿಂದೂ ಪಿಯು ಕಾಲೇಜಿನ ಸುಂದರ ಎಂ ಇವರನ್ನು, ದ್ವಿತೀಯ ಪಿಯು ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಿಗಳಾಗಿ ಹೊರಹೊಮ್ಮಿದ ವಿಜ್ಞಾನ ವಿಭಾಗದ 11, ವಾಣಿಜ್ಯವಿಭಾಗದ 13 ಹಾಗೂ ಕಲಾ ವಿಭಾಗದ ಮೂವರು ಸೇರಿದಂತೆ 27 ಸಾಧಕ ವಿದ್ಯಾರ್ಥಿಗಳನ್ನು, 2026-27ನೇ ಸಾಲಿನಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗುವಲ್ಲಿ ಮಾರ್ಗದರ್ಶನ ನೀಡಿದ ಎಂ.ಜಿ.ಎಂ ಪಿಯು ಕಾಲೇಜಿನ ದೈ.ಶಿ.ನಿರ್ದೇಶಕ ಸತೀಶ್ ಶೆಟ್ಟಿ ಶಾನಾಡೆಯವರನ್ನು ಸಂಘ ಹಾಗೂ ಮಾಹೆ ಮಣಿಪಾಲದ ವತಿಯಿಂದ ಗುರುತಿಸಿ ಗೌರವಿಸಲಾಯಿತು.

ಸಂಘದ ಖಜಾಂಚಿ ಐವನ್ ಸುವಾರೆಸ್ ಉಪಸ್ಥಿತರಿದ್ದರು. ಕಾರ್ಯದರ್ಶಿ ದಿನೇಶ್ ಎಂ ಕೊಡವೂರ್ ಸ್ವಾಗತಿಸಿ, ಜ್ಞಾನಸುಧಾ ಪ.ಪೂ.ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ದರ್ಶಿನಿ ಕೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!