Thursday, September 10, 2026
Thursday, September 10, 2026

ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ

ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ

Date:

ತೆಂಕನಿಡಿಯೂರು, ಸೆ. 10: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ ವತಿಯಿಂದ “Hear, Heal, Hope: Mental Health Awareness through Lived Experiences” ಎಂಬ ಶೀರ್ಷಿಕೆಯಡಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಉಡುಪಿ ಇದರ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾನಸಿಕ ಆರೋಗ್ಯದ ಸಾಮಾಜಿಕ ಅಭಿಯಾನಿ ಸೆಹರ್ ಹಶ್ಮಿ ಭಾಗವಹಿಸಿದ್ದರು. ಭಾರತದಲ್ಲಿ ಮೌನವಾಗಿ ಮುಂದುವರಿಯುತ್ತಿರುವ ಮಾನಸಿಕ ಆರೋಗ್ಯ ಬಿಕ್ಕಟ್ಟಿನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ರಾಷ್ಟ್ರಮಟ್ಟದ ಮೋಟಾರ್‌ಸೈಕಲ್ ಜಾಗೃತಿ ಅಭಿಯಾನದ ಭಾಗವಾಗಿ ಕಾಲೇಜಿಗೆ ಆಗಮಿಸಿದ್ದ ಅವರು, ತಮ್ಮ ವೈಯಕ್ತಿಕ ಅನುಭವಗಳೊಂದಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಡದೆ ಅವುಗಳ ಕುರಿತು ಮುಕ್ತವಾಗಿ ಮಾತನಾಡಬೇಕು. “ಇಚ್ಛಾಶಕ್ತಿ ಮತ್ತು ಸೂಕ್ತವಾದ ಬೆಂಬಲವು ವ್ಯಕ್ತಿಯ ಚೇತರಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ” ಎಂದು ಸೆಹರ್ ಹಶ್ಮಿ ಹೇಳಿದರು. ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯನ್ನು ಟೀಕಿಸುವ ಬದಲು ಅವರ ಮಾತುಗಳನ್ನು ಆಲಿಸಿ, ಅರ್ಥಮಾಡಿಕೊಂಡು, ಪ್ರೋತ್ಸಾಹಿಸಬೇಕು ಹಾಗೂ ಅಗತ್ಯವಿದ್ದಾಗ ವೃತ್ತಿಪರ ಸಹಾಯ ಪಡೆಯಲು ನೆರವಾಗಬೇಕು ಎಂದು ಅವರು ಕರೆ ನೀಡಿದರು. ಕುಟುಂಬ, ಸ್ನೇಹಿತರು, ಶಿಕ್ಷಕರು ಹಾಗೂ ಸಮಾಜದ ಬೆಂಬಲವು ವ್ಯಕ್ತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಿ ಚೇತರಿಕೆಯ ಹಾದಿಯಲ್ಲಿ ಮುನ್ನಡೆಯಲು ಸಹಕಾರಿಯಾಗುತ್ತದೆ. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟೇ ಮಹತ್ವದ್ದಾಗಿದ್ದು, ಯುವಜನರು ಒತ್ತಡ, ಆತಂಕ ಹಾಗೂ ಇತರ ಮಾನಸಿಕ ಸವಾಲುಗಳನ್ನು ಎದುರಿಸುವಾಗ ಸಹಾಯ ಪಡೆಯಲು ಹಿಂಜರಿಯಬಾರದು ಎಂದು ಅವರು ತಿಳಿಸಿದರು. ಮಾನಸಿಕ ಆರೋಗ್ಯದ ಬಗ್ಗೆ ಸಮಾಜದಲ್ಲಿರುವ ತಪ್ಪು ಕಲ್ಪನೆಗಳು ಹಾಗೂ ಕಳಂಕವನ್ನು ನಿವಾರಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಹೇಳಿದರು. ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಇಂದಿನ ಸಂದರ್ಭದಲ್ಲಿ ಅತ್ಯಂತ ಪ್ರಸ್ತುತವಾಗಿವೆ ಎಂದರು. ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅಗತ್ಯವಿರುವ ಸಂದರ್ಭದಲ್ಲಿ ಅವರಿಗೆ ಮಾನವೀಯ ಬೆಂಬಲ ನೀಡಬೇಕು ಎಂದು ಸಲಹೆ ನೀಡಿದರು. ಎನ್.ಎಸ್.ಎಸ್. ಅಧಿಕಾರಿ ಡಾ. ಜಯಮಂಗಲ ಸ್ವಾಗತಿಸಿದರು, ಎನ್.ಎಸ್.ಎಸ್ ಅಧಿಕಾರಿ ಬಾಲರಾಜ್ ಡಿ. ಬಿ. ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...

ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

ಉಡುಪಿ, ಸೆ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ; ಶೈಕ್ಷಣಿಕ ಸಾಧಕರಿಗೆ ಗೌರವ

ಉಡುಪಿ, ಸೆ.10: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಹುಆಯ್ಕೆಯ ಗೊಂದಲವಿರುವುದರಿಂದ ಸರಿಯಾದ...
error: Content is protected !!