Friday, October 2, 2026
Friday, October 2, 2026

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

Date:

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ ಬೋಧಕ ಅಥವಾ ಧರ್ಮ ಬೋಧಕ ಅಲ್ಲ, ಆದರೆ ಸಮಾಜದ ಅಂಕು ಡೊಂಕುಗಳನ್ನು ತನ್ನ ಬರವಣಿಗೆಯ ಮೂಲಕ ತಿದ್ದುವ ಚಿಕಿತ್ಸಕ. ಬರವಣಿಗೆ ಮೂಲಕ ವಿಚಾರದ ಬೆಳಕು ಚೆಲ್ಲಿ ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವವರು ಕವಿಗಳು. ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುತ್ತದೆ ಎಂದು ಹಿರಿಯ ಲೇಖಕಿ ವಸಂತಿ ಶೆಟ್ಟಿ ಬ್ರಹ್ಮಾವರ ಅಭಿಪ್ರಾಯಪಟ್ಟರು. ಕರ್ನಾಟಕ ಸರ್ಕಾರ ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಇವರ ಸಹಯೋಗದಲ್ಲಿ ವಿದ್ಯಾವಾಚಸ್ಪತಿ ಬನ್ನಂಜೆ ಡಾ. ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ ಗ್ರಂಥಾಲಯದಲ್ಲಿ ಸಾಹಿತಿ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಹಿತಿ ಅಥವಾ ಕವಿ ವ್ಯಥೆಪಡುವುದಿಲ್ಲ ಬದಲಿಗೆ ವ್ಯಥೆಯನ್ನು ಕಥೆ ಮಾಡುವ ಶಕ್ತಿ ಅವರಲ್ಲಿರುತ್ತದೆ ತಾಯಿಯು ತನ್ನ ಮಕ್ಕಳಿಗೆ ಚಿಕ್ಕಂದಿನಲ್ಲಿ ಕಥೆ ಶಿಶು ಗೀತೆಗಳು ಹೇಳುತ್ತಾ ಒಬ್ಬ ಸಾಹಿತಿಯಾಗಿ ರೂಪಗೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ ಇರಬೇಕು ತಮ್ಮ ಜೀವನದ ಅನುಭವಗಳನ್ನು ಬರೆಯುವ ಅಭ್ಯಾಸವನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಎಂದ ಅವರು ಜೀವನ ಮೌಲ್ಯಗಳನ್ನು ಅರಿತ, ನುರಿತ ಅನುಭವಸ್ಥರಿಂದ ಯುವಕರಿಗೆ ಮಾರ್ಗದರ್ಶನ ನೀಡಲು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಈ ಕಾರ್ಯಕ್ರಮದ ಮೂಲಕ ಅವಕಾಶ ಮಾಡಿಕೊಟ್ಟಿದ್ದಾರೆ. ಹಿರಿಯರಾದ ವಿ.ಎಸ್ ಆಚಾರ್ಯರ ದೂರದೃಷ್ಟಿಯಿಂದ ಸುಸಜ್ಜಿತ ಗ್ರಂಥಾಲಯ ಜಿಲ್ಲೆಗೆ ದೊರಕಿದೆ. ಗ್ರಂಥಾಲಯದಲ್ಲಿ ಸಾಹಿತಿ ಸೌಲಭ್ಯ ಒಂದು ಅತ್ಯುತ್ತಮ ಕಾರ್ಯಕ್ರಮ ಎಂದು ಅವರು ಹೇಳಿದರು

ಕ.ಸಾ.ಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಜಿಲ್ಲಾಧಿಕಾರಿಯವರ ಮುತುವರ್ಜಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಎಲ್ಲರೂ ಮೆಚ್ಚುವಂತಹ ಕಾರ್ಯವಾಗಿದೆ ಮಕ್ಕಳಲ್ಲಿ ಓದುವ ಮತ್ತು ಬರೆಯುವ ಸಂಸ್ಕೃತಿ ಬೆಳೆಯಬೇಕು ಜೊತೆಗೆ ಯುವಜನತೆಗೆ ಸಾಹಿತಿಗಳ ಪರಿಚಯವು ಆಗಬೇಕು ಎಂದು ಅವರು ಹೇಳಿದರು. ಮುಖ್ಯ ಗ್ರಂಥಾಲಯ ಅಧಿಕಾರಿ(ಪ್ರ) ನಮಿತಾ ಬಿ ಸ್ವಾಗತಿಸಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥ ಪಾಲಕಿ ವನಿತಾ ಕೆ ವಂದಿಸಿ, ಸಿಬ್ಬಂದಿ ಶ್ಯಾಮಲಾ ಸಾಹಿತಿಯ ಪರಿಚಯ ನೀಡಿ, ಪ್ರಥಮ ದರ್ಜೆ ಸಹಾಯಕಿ ಪ್ರೇಮ ನಿರೂಪಿಸಿದರು. ಡಾ. ಜಿ ಶಂಕರ್ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು, ಗ್ರಂಥಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!