Friday, October 23, 2026
Friday, October 23, 2026

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

Date:

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕಬಡ್ಡಿ ಪಂದ್ಯಾವಳಿಯು ಸೆಪ್ಟೆಂಬರ್‌ 10 ಗುರುವಾರ ಕಾರ್ಕಳದ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಚೇತನ್ ಹಾಗೂ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರು ಉಡುಪಿ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್ ನ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್‌ ಎಸ್.‌ ಎಲ್‌, ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ಅಸೋಸಿಯೇಶನ್ ನ ತೀರ್ಪುಗಾರರಾದ ಸಂತೋಷ್, ಪ್ರಶಾಂತ್ ಶೆಟ್ಟಿ, ಅಣ್ಣಪ್ಪ ಭಾಗವಹಿಸಿದ್ದರು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು 8 ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಸಮರ ಕಲೆಯ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾದ ಶಶಿಧರ್ ಶೆಟ್ಟಿ ರವರು ಮಾತನಾಡಿ ಕ್ರಿಯೇಟಿವ್‌ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನ ಸಹ ಸಂಸ್ಥಾಪಕರಾದ ಅಶ್ವತ್ ಇವರು ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಯುವ ಕಬಡ್ಡಿ ಪಟುಗಳನ್ನು ಹುರಿದುಂಬಿಸಿದರು. ದಿನವಿಡೀ ನಡೆದ ರೋಮಾಂಚಕ ಪಂದ್ಯಗಳ ನಂತರ ಜಯಭೇರಿ ಸಾಧಿಸಿದ ಸುಮಾರು ನಲವತ್ತೆಂಟು ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಹಾಗೂ ಸಂಸ್ಥೆಯ ಇನ್ನೋರ್ವ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ

ನವದೆಹಲಿ, ಅ.23: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವೊಂದು ಉಂಟಾಗಿದ್ದು, ಮುಂದಿನ ದಿನಗಳಲ್ಲಿ...

ಟಿಬೆಟ್‌ನಲ್ಲಿ ಭೂಕಂಪ: 16 ಮಂದಿ ಸಾವು, 54ಕ್ಕೂ ಹೆಚ್ಚು ಮಂದಿಗೆ ಗಾಯ

ಯು.ಬಿ.ಎನ್.ಡಿ., ಅ.23: ಟಿಬೆಟ್‌ನ ನಾಗ್ಚು ನಗರದ ಬಾಕ್ವೆನ್ ಕೌಂಟಿಯಲ್ಲಿ ಗುರುವಾರ ಸಂಜೆ...

ಬಿ. ಬಿ. ಹೆಗ್ಡೆ ಕಾಲೇಜು: ಸರಸ್ವತಿ ಹಾಗೂ ಶಾರದಾ ಪೂಜೆ

ಕುಂದಾಪುರ, ಅ.23: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಶ್ರೀ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ

ಉಡುಪಿ, ಅ.23: ವಿಜಯದಶಮಿ ಪರ್ವಕಾಲದಲ್ಲಿ ಶ್ರೀ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ...
error: Content is protected !!