Saturday, October 17, 2026
Saturday, October 17, 2026

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

Date:

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ ವಿಭಾಗ, ಕಮಲ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ, ಡಾ. ಎ.ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆ, ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA), ಉಡುಪಿ ಕರಾವಳಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಉಡುಪಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅಂಗವಾಗಿ ಗುರುವಾರ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ತೆಂಕನಿಡಿಯೂರು, ಕುಮುದ ನರ್ಸಿಂಗ್ ಕಾಲೇಜು ದಾವಣಗೆರೆ ಹಾಗೂ ಸರ್ಕಾರಿ ನರ್ಸಿಂಗ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ವಿಶ್ವೇಶ್ವರ ಅವರ ಆಶ್ರಯ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಂತರ ಪದ್ಮಾ ರಾಘವೇಂದ್ರ ಅವರು ಸ್ವಾಗತಿಸಿದರು.

ನಿತ್ಯಾನಂದ ವಿ. ಗಾಂವ್ಕರ್, ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಂದೆ ಡಾ. ವಾಸುದೇವ್, ನಿವಾಸಿ ವೈದ್ಯಾಧಿಕಾರಿ, ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು ಇವರು ಶುಭ ಹಾರೈಸಿದರು. ಡಾ. ಅಶೋಕ್ ಕುಮಾರ್, ಮಕ್ಕಳ ತಜ್ಞರು ಹಾಗೂ ಅಧ್ಯಕ್ಷರು, ಐಎಂಎ ಉಡುಪಿ ಕರಾವಳಿ ಇವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಡಾ. ಸುನಿಲ್ ಕುಮಾರ್, ಮನೋವೈದ್ಯರು, ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು ಇವರು ಕಾರ್ಯಕ್ರಮದ ಉದ್ದೇಶದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಪಿ.ವಿ. ಭಂಡಾರಿ ಅವರು ವಹಿಸಿ ಮಾತನಾಡಿದರು.

ಸಭಾ ಕಾರ್ಯಕ್ರಮದ ನಂತರ ನಾಗರಾಜ ಮೂರ್ತಿ, ಮನಶ್ಶಾಸ್ತ್ರಜ್ಞರು, ಡಾ. ದೀಪಕ್ ಮಲ್ಯ, ಡಾ. ಮಾನಸ್ ಇ ಆರ್ ಹಾಗೂ ಸೌಜನ್ಯ ಶೆಟ್ಟಿ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವಿಶೇಷ ಅವಧಿಗಳನ್ನು ನಡೆಸಿಕೊಟ್ಟರು.

ಶ್ರೀಜಾ ಹಾಗೂ ಕೀರ್ತಿ ಅವರು ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ಅವರು ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!