Saturday, October 3, 2026
Saturday, October 3, 2026

ಉಡುಪಿ ಬ್ಲಾಕ್ ಕಾಂಗ್ರೆಸ್: ಎಸ್.ಐ.ಆರ್ ಪ್ರಕ್ರಿಯೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಉಡುಪಿ ಬ್ಲಾಕ್ ಕಾಂಗ್ರೆಸ್: ಎಸ್.ಐ.ಆರ್ ಪ್ರಕ್ರಿಯೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Date:

ಮಣಿಪಾಲ, ಸೆ.11: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.

ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಮತದಾರರ ವಿವರಗಳಲ್ಲಿನ ವ್ಯತ್ಯಾಸ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಮತದಾರರಿಗೆ ನೋಟಿಸ್ ಬಂದಿರುತ್ತದೆ. ನೋಟಿಸ್‌ನಲ್ಲಿ ಸೂಚಿಸಿದ ದಾಖಲೆಗಳು ಮತದಾರರಲ್ಲಿ ಇಲ್ಲದಿದ್ದಾಗ ಚುನಾವಣಾ ಆಯೋಗವು ಮಾನ್ಯ ಮಾಡುವ ವಾಸ್ತವ್ಯ ದೃಢೀಕರಣ ಪತ್ರಕ್ಕಾಗಿ ಸ್ಥಳೀಯ ಕಂದಾಯ ಅಧಿಕಾರಿಗಳ ಬಳಿ ಹೋದಾಗ ವಿವಿಧ ಕಾರಣಗಳನ್ನು ನೀಡಿ ಸತಾಯಿಸಿದ ಬಹಳಷ್ಟು ನಿದರ್ಶನಗಳಿದ್ದು ಬಾಡಿಗೆ ಮನೆಗಳಲ್ಲಿ ವಾಸಿಸುವರು ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ವಾಸಿಸುತ್ತಿದ್ದರೂ ಸೂಕ್ತ ದಾಖಲೆಗಳನ್ನು ಹೊಂದಿರದವರು ಹಳೆಯ ದಾಖಲೆಗಳಲ್ಲಿ ವಿಳಾಸದ ವ್ಯತ್ಯಾಸ ಹೊಂದಿರುವ ಮತದಾರರು ಅನಗತ್ಯವಾಗಿ ಪ್ರತಿನಿತ್ಯ ಕಂದಾಯ ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತದಾನದ ಸಾಂವಿಧಾನಿಕ ಹಕ್ಕಿನಿಂದ ಯಾರೊಬ್ಬರೂ ವಂಚಿತರಾಗದಂತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗದಂತೆ ಎಸ್.ಐ.ಆರ್ ಗೆ ಸಂಬಂಧಿಸಿದಂತೆ ಅರ್ಹ ನಾಗರಿಕರು ವಾಸ್ತವ್ಯ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಕೂಡಲೇ ನಿಯಮಾನುಸಾರ ಅದನ್ನು ನೀಡಲು ಸೂಕ್ತ ನಿರ್ದೇಶನ ನೀಡುವಂತೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಮಾಡಲಾಯಿತು.

ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ಕೃಷ್ಣ ಹೆಬ್ಬಾರ್, ಹರಿಪ್ರಸಾದ್ ರೈ, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಶಶಿರಾಜ್ ಕುಂದರ್, ಲಕ್ಷ್ಮಣ್ ಪೂಜಾರಿ, ಮಮತಾ ಶೆಟ್ಟಿ, ಆಶಾ ಚಂದ್ರಶೇಖರ್, ಸಂಧ್ಯಾ ತಿಲಕ್‌ರಾಜ್, ಸದಾನಂದ್ ಕುಲಾಲ್, ಆರೀಫ್, ಬೋನಿಫಾಸ್, ಭರತ್ ಕುಮಾರ್, ಶಕುಂತಲಾ, ದಯಾನಂದ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!