Saturday, October 3, 2026
Saturday, October 3, 2026

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

Date:

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚಾಂತಾರು ರೆಡ್ ಕ್ರಾಸ್ ಜಿಲ್ಲಾ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಅವರನ್ನು ಅತ್ಮೀಯವಾಗಿ ಸನ್ಮಾನಿಸಲಾಯಿತು. ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ, ಮನಶಾಸ್ತ್ರಜ್ಞರಾದ ವೈಶಾಖ್ ವಾರಂಬಳ್ಳಿ ಆಡಿಯೋಲಜಿಸ್ಟ್ ನೆಲಿಶಾ ಹಾಗೂ ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!