ಕೋಟಿ ತುಳಸಿ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ, ಸೆ.14: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಆಶ್ರಯದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಸಭಾ ಸಹಯೋಗದೊಂದಿಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕೃಷ್ಣ ಮಠದಲ್ಲಿ ಅಕ್ಟೋಬರ್ 4 ರಂದು ನಡೆಯಲಿರುವ ಕೋಟಿ ತುಳಸಿ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ಬಿಡುಗಡೆಗೊಳಿಸಿದರು. ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಹಾಗೂ ಉಡುಪಿ ಬ್ರಾಹ್ಮಣ ಸಭಾದ ಗೌರವ ಅಧ್ಯಕ್ಷರಾದ ಮಂಜುನಾಥ ಉಪಾಧ್ಯ, ಅಧ್ಯಕ್ಷರಾದ ಶ್ರೀಕಾಂತ್ ಉಪಾಧ್ಯ, ಕಾರ್ಯದರ್ಶಿ ದುರ್ಗಾಪ್ರಸಾದ್, ಕೋಶಾಧಿಕಾರಿ ಹಯವದನ ಭಟ್, ಹಿರಿಯ ವಕೀಲ ಜಯಪ್ರಕಾಶ್ ಕೆದ್ಲಾಯ, ಜಿಲ್ಲಾಧ್ಯಕ್ಷ ಸಂದೀಪ್ ಮಂಜ ಮತ್ತು ಎಲ್ಲಾ ವಲಯದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™