Wednesday, October 14, 2026
Wednesday, October 14, 2026

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Date:

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 2 ಇದರ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ. ಶೇಷಪ್ಪ ಅಮೀನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಸಮಾಜದ ಒಳಿತಿಗಾಗಿ ವಿದ್ಯಾರ್ಥಿಗಳು ತಮ್ಮ ಸಮಯ ಮತ್ತು ಶ್ರಮವನ್ನು ವಿನಿಯೋಗಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಉಮೇಶ್ ಶೆಟ್ಟಿ ಮಾತನಾಡಿ, ಎನ್.ಎಸ್.ಎಸ್. ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಮಾಜದ ವಿವಿಧ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್. ಎಸ್. ಎಸ್ ಘಟಕದ ಕ್ರಿಯಾಯೋಜನೆಗಳ ವರದಿ ಮಂಡಿಸಿದರು. ಎನ್ಎಸ್ಎಸ್ ಸ್ವಯಂಸೇವಕ ಪ್ರತಿನಿಧಿ ರೋನಿತ್ ಶೆಟ್ಟಿ ಸ್ವಾಗತಿಸಿ, ಪ್ರತೀಕ್ಷಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ರಜತ್ ವಂದಿಸಿದರು. ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!