Monday, September 28, 2026
Monday, September 28, 2026

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

Date:

ಕಾರ್ಕಳ, ಸೆ.18: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಭುವನೇಂದ್ರ ಪದವಿಪೂರ್ವ ಕಾಲೇಜಿನ ದೈ.ಶಿ. ಉಪನ್ಯಾಸಕ ನವೀನ್ ಚಂದ್ರ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಯು ವಿದ್ಯಾರ್ಥಿಯ ಜೀವನಕ್ಕೆ ರಹದಾರಿ. ಶಿಕ್ಷಣವೆಂದರೆ ಬರಿಯ ಓದಲ್ಲ. ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡವನು ಕುಗ್ಗಿದ ಉದಾಹರಣೆ ತೀರ ವಿರಳ. ಜೀವನ ಸ್ಫೂರ್ತಿಗೆ ಕ್ರೀಡೆ ದಾರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ವಹಿಸಿದ್ದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿ ದಿನೇಶ್ ಕುಮಾರ್, ಕಾರ್ಕಳ ತಾಲೂಕು ಕ್ರೀಡಾ ಸಂಯೋಜನಾಧಿಕಾರಿ ಶರತ್ ಭಟ್, ಜಿಲ್ಲಾ ದೈ.ಶಿ. ಉಪನ್ಯಾಸಕ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ, ಸಂಸ್ಥೆಯ ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಕಾಲೇಜಿನ ದೈ.ಶಿ.ಉಪನ್ಯಾಸಕಿ ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!