Monday, November 9, 2026
Monday, November 9, 2026

ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ ಸ್ಥಾನ

ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ ಸ್ಥಾನ

Date:

ಕಾರ್ಕಳ, ಸೆ.21: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ ಉಡುಪಿಯ ಎಂ.ಜಿ.ಎಂ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕಾಲೇಜು ಹಾಗೂ ದ್ವಿತೀಯ ಸ್ಥಾನವನ್ನು ಉಡುಪಿಯ ಎಂ.ಜಿ.ಎಂ ಪದವಿಪೂರ್ವ ಕಾಲೇಜು ತನ್ನದಾಗಿಸಿಕೊಂಡಿರುತ್ತದೆ. ಪಂದ್ಯಾಟದಲ್ಲಿ ಮೋಸ್ಟ್ ವ್ಯಾಲ್ಯೂಬಲ್ ಆಟಗಾರ ಪ್ರಶಸ್ತಿಯನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಋತ್ವಿಕಾ ಹಾಗೂ ನಿಟ್ಟೆ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಪ್ರಣೀತ್ ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಎಸ್.ವಿ.ಟಿ ಪದವಿಪೂರ್ವ ಕಾಲೇಜಿನ ದೈ.ಶಿಕ್ಷಣ ಉಪನ್ಯಾಸಕಿ ಪ್ರಭಾವತಿ ಆಗಮಸಿ, ವಿಜೇತ ತಂಡಗಳಿಗೆ ಶುಭ ಹಾರೈಸಿದರು. ಕಾರ್ಕಳ ತಾಲೂಕು ಕ್ರೀಡಾ ಸಂಯೋಜನಾಧಿಕಾರಿ ಶರತ್ ಭಟ್, ಕಾಲೇಜಿನ ದೈ.ಶಿ.ಉಪನ್ಯಾಸಕಿ ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!