ಉಡುಪಿ/ ಮಂಗಳೂರು: ಕುಂಭದ್ರೋಣ ಮಳೆಗೆ ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 1) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯೂ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.