Monday, November 9, 2026
Monday, November 9, 2026

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆ ಮತ್ತು ಬ್ರಹ್ಮಾವರ ತಾಲೂಕು ಆಸ್ಪತ್ರೆ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆ ಮತ್ತು ಬ್ರಹ್ಮಾವರ ತಾಲೂಕು ಆಸ್ಪತ್ರೆ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಸೆ.22: ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವರಾದ ಯು. ಟಿ. ಖಾದರ್ ರವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಜನತೆಯ ಬಹುಕಾಲದ ಕನಸಾದ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು ಡಿಸೆಂಬರ್ 2021ರಲ್ಲಿ ಪ್ರಾರಂಭಿಸಲಾಗಿದ್ದು, ಪ್ರಸ್ತುತ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮತ್ತು ಚಿಕಿತ್ಸೆಗಳನ್ನು ಒಳಗೊಂಡಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ 250 ಹಾಸಿಗೆಗಳ ಸೌಕರ್ಯಗಳನ್ನೊಳಗೊಂಡ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಶೀಘ್ರವಾಗಿ ಲೋಕಾರ್ಪಣೆ ಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರವು ನೂತನ ತಾಲೂಕಾಗಿ ರಚನೆಯಾಗಿ ಸುಮಾರು ಎಂಟು ವರ್ಷಗಳು ಕಳೆದಿದ್ದು, ತಾಲೂಕು ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ರಹ್ಮಾವರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದ್ದು, ತಾಲೂಕಿನ ಜನರಿಗೆ ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ, ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಹಾಗೂ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಬಿ. ಆರ್. ಶೆಟ್ಟಿ. ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಉದ್ದೇಶಕ್ಕೆ ಭೂಮಿಯ ಕೆಲಸ ಪ್ರಾರಂಭಿಸಿ ಕಟ್ಟಡದ ಪಾರ್ಕಿಂಗ್ ಉದ್ದೇಶಕ್ಕೆ ಸುಮಾರು 30 ಅಡಿಗಳಿಗೂ ಹೆಚ್ಚು ಅಗೆತ ಮಾಡಿರುವ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಮತ್ತು ಸರಕಾರಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸುವಂತೆ ಸಚಿವರಿಗೆ ತಿಳಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಅವರ ಮನವಿಗೆ ಸ್ಪಂದಿಸಿದ ಸಚಿವ ಯು. ಟಿ. ಖಾದರ್ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!