Tuesday, October 13, 2026
Tuesday, October 13, 2026

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

Date:

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಲಲಿತ ಕಲಾ ಸಂಘದ ವತಿಯಿಂದ ಸೆಪ್ಟೆಂಬರ್ 19, ಶನಿವಾರದಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ ಆಯೋಜಿಸಲಾಯಿತು. ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಈ ಭೇಟಿಯಲ್ಲಿ ಭಾಗವಹಿಸಿದರು. ಈ ಸಂದರ್ಭ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಲ್ಲಿನ ಪಾರಂಪರಿಕ ಕಲೆ, ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ವೈಶಿಷ್ಟ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಛಾಯಾಚಿತ್ರಗಳು, ಶಿಲೆಗಳು ಹಾಗೂ ಅಲ್ಲಿನ ವಿವಿಧ ಐತಿಹಾಸಿಕ ಮತ್ತು ಕಲಾತ್ಮಕ ಅಂಶಗಳ ಮೂಲಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸಿದರು. ವಿದ್ಯಾರ್ಥಿಗಳು ಅಲ್ಲಿನ ವಿವಿಧ ಕಲಾಕೃತಿಗಳು, ಐತಿಹಾಸಿಕ ಕುರುಹುಗಳು ಹಾಗೂ ಪಾರಂಪರಿಕ ವಸ್ತುಗಳನ್ನು ವೀಕ್ಷಿಸುವ ಮೂಲಕ ನಮ್ಮ ನಾಡಿನ ಕಲೆ, ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಂಡರು. ಲಲಿತ ಕಲಾ ಸಂಘದ ಸಂಯೋಜಕರು ಮತ್ತು ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕರಾದ ದೀಪಿಕಾ ಜಿ. ಹಾಗೂ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಿರ್ಮಲಾ ಬಿ. ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!