Saturday, September 26, 2026
Saturday, September 26, 2026

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

Date:

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್‌ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಮಣಿಪಾಲ ಪೋಲಿಸ್‌ ಠಾಣೆಯ ಪೋಲಿಸ್‌ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ಇವರು ಮಾತನಾಡಿ ಕ್ರೀಡೆ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಹಾಗೂ ಇವು ಕ್ರೀಡಾಪಟುಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ. ಕ್ರೀಡೆಯ ಧ್ಯೇಯ ಮತ್ತು ಛಲದ ಗುಣಗಳು ಒಳ್ಳೆಯ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಮುಂದಿರುವ ಕ್ರೀಡಾಪಟುಗಳು ಉತ್ತಮ ದೇಶವನ್ನು ನಿರ್ಮಾಣ ಮಾಡುವ ಮತ್ತು ಸಮಾಜದ ಉತ್ತಮ ನಾಗರೀಕರಾಗುವ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿದ್ದ ರವೀಂದ್ರ ಉಪಾಧ್ಯ, ಪ್ರಭಾರ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಉಡುಪಿ ಜಿಲ್ಲೆ ಇವರು ಮಾತನಾಡಿ, ಉಡುಪಿ ಜಿಲ್ಲೆಯು ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಹಾಗೂ ಕ್ರೀಡಾಪಟುಗಳಿಗೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಸ್ಫೂರ್ತಿ ತುಂಬಾ ಅಗತ್ಯವಾಗಿದ್ದು, ಅದನ್ನು ಎಲ್ಲಾ ಕ್ರೀಡಾಪಟುಗಳು ಮೈಗೂಡಿಸಿಕೊಳ್ಳಿ ಎಂಬ ಆಶಯದ ನುಡಿಗಳನ್ನಾಡಿದರು. ದಿನೇಶ್ ಕುಮಾರ್ ಎ, ಕ್ರೀಡಾ ಸಂಯೋಜಕರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಉಡುಪಿ ಜಿಲ್ಲೆ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಸುಕೇಶ್‌ ಶೆಟ್ಟಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಕ್ರೀಡಾ ಸಂಯೋಜಕರಾದ ಮಂಜುನಾಥ ಜೋಗಿ, ಪರಿವೀಕ್ಷಕರಾದ ಶರತ್‌ ಮತ್ತು ಅಜೆಕಾರ್‌ ಪದ್ಮ ಗೋಪಾಲ್‌ ಎಜ್ಯಕೇಶನ್‌ ಟ್ರಸ್ಟ್ ನ ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ಸ್ವಾಗತಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭ: ಸಮಾರೋಪ ಸಮಾರಂಭದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ದಿನೇಶ್‌ ಎಮ್‌ ಕೊಡವೂರು ವಿಜೇತರಿಗೆ ಬಹುಮಾನವನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪ ಪ್ರಾಂಶುಪಾಲರುಗಳಾದ ರವಿ ಜಿ., ನವೀನ್‌ ಎ., ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆಯ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ ಮತ್ತು ಪರಿವೀಕ್ಷಕರಾದ ಶರತ್‌ ಉಪಸ್ಥಿತರಿದ್ದರು. ಬಾಲಕರ ವಿಭಾಗದಲ್ಲಿ ಉಡುಪಿ ತಾಲೂಕು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿತು. ಕಾಪು ತಾಲೂಕು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಕಾರ್ಕಳ ತಾಲೂಕು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿತು ಮತ್ತು
ಕಾಪು ತಾಲೂಕು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...

ರಥಬೀದಿ ಕಾಲೇಜು: ಕಾನೂನು ಅರಿವು ಕಾರ್ಯಕ್ರಮ

ಮಂಗಳೂರು, ಸೆ.25: ಡಾ. ಪಿ ದಯಾನಂದ ಪೈ ಪಿ ಸತೀಶ ಪೈ...
error: Content is protected !!