Tuesday, October 20, 2026
Tuesday, October 20, 2026

ವಾರಂಬಳ್ಳಿ ಇ.ಎಸ್.ಐ. ಆಸ್ಪತ್ರೆ ಕಾಮಗಾರಿ ಸ್ಥಳ ಪರಿಶೀಲನೆ

ವಾರಂಬಳ್ಳಿ ಇ.ಎಸ್.ಐ. ಆಸ್ಪತ್ರೆ ಕಾಮಗಾರಿ ಸ್ಥಳ ಪರಿಶೀಲನೆ

Date:

ಬ್ರಹ್ಮಾವರ, ಸೆ.28: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಇ.ಎಸ್.ಐ. ಆಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ವಾರಂಬಳ್ಳಿ ಗ್ರಾಮದ 5.13 ಎಕ್ರೆ ಜಾಗದಲ್ಲಿ 100 ಬೆಡ್ ಆಸ್ಪತ್ರೆ ಹಾಗೂ ಸಿಬ್ಬಂದಿಗಳಿಗೆ 32 ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರಾಗಿದ್ದು, ಸುಮಾರು 2 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಈ ಭಾಗದ ಸುತ್ತಮುತ್ತಲೂ ಜನವಸತಿ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಕ್ಕೂ ಮುನ್ನ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಮುಖಂಡರೊಂದಿಗೆ ಕಾಮಗಾರಿಯ ಸ್ವರೂಪ ಹಾಗೂ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಿ ಮಳೆ ನೀರು, ರಸ್ತೆ ಸಂಪರ್ಕ, ವ್ಯವಸ್ಥಿತ ತ್ಯಾಜ್ಯ ನಿರ್ವಹಣೆ ಸಹಿತ ಮೂಲ ಸೌಕರ್ಯಗಳ ಬಗ್ಗೆ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.

ಇ.ಎಸ್.ಐ. ಇಲಾಖೆಯ ಉಪ ನಿರ್ದೇಶಕರಾದ ಜತಿನ್ ಮೀನಾ, ಸಾಮಾಜಿಕ ಭದ್ರತಾ ಅಧಿಕಾರಿ ವಿನಾಯಕ, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಬಿ. ಆರ್., ಸ್ಥಳೀಯ ಮುಖಂಡರಾದ ರಾಜೇಶ್ ಶೆಟ್ಟಿ ಬಿರ್ತಿ, ಎಸ್. ನಾರಾಯಣ, ನವೀನ್ ಚಂದ್ರ ನಾಯಕ್, ನಿರಂಜನ್ ಶೆಟ್ಟಿ, ದೇವಾನಂದ, ನಾಗವೇಣಿ, ಉಮಾ ಬಾಯಿ, ರಾಜೀವ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!