Sunday, November 22, 2026
Sunday, November 22, 2026

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

Date:

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟಂಬರ್ 19 ರಂದು ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಂದೇ ದಿನ ರಾಜೀಯಾಗಬಲ್ಲ ಚೆಕ್ಕು ಅಮಾನ್ಯ – 261 ಪ್ರಕರಣ, ಬ್ಯಾಂಕ್/ಹಣ ವಸೂಲಾತಿ – 79 ಪ್ರಕರಣ, ವೈವಾಹಿಕ 2 ಪ್ರಕರಣಗಳು, ಇತರೇ ಸಿವಿಲ್ 3190 ಪ್ರಕರಣಗಳು, ಎಂ.ಎ.ಸಿ.ಟಿ 47 ಪ್ರಕರಣ, ಕಾರ್ಮಿಕ ವಿವಾದ 1 ಪ್ರಕರಣ, ಹಣಕಾಸು ಸಂಬಂಧಿತ 3 ಪ್ರಕರಣ, ಇತರೇ ಕ್ರಿಮಿನಲ್ 12 ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 57,772 ಪ್ರಕರಣಗಳು ಸೇರಿದಂತೆ ಒಟ್ಟು 61,367 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.14,45,52,485 ಪರಿಹಾರದ ಮೊತ್ತವನ್ನು ಘೋಷಿಸಲಾಯಿತು. ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಬ್ರಹ್ಮಾವರ, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ, ನ.21: ಗಂಗೊಳ್ಳಿಯ ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ...

ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ನ.21: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್...

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

ಉಡುಪಿ, ನ.21: ಕೇಂದ್ರ ಸರ್ಕಾರದ ಎಂ.ಎಸ್.ಎA.ಇ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ...

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

ಉಡುಪಿ, ನ.21: ಹರಿಖಂಡಿಗೆಯ ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ...
error: Content is protected !!