Wednesday, October 21, 2026
Wednesday, October 21, 2026

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

Date:

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ ಶೈಕ್ಷಣಿಕ ಕ್ಷೇತ್ರದ ಸದಸ್ಯರಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ರವರು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕನಾಗಿ, ವಿಭಾಗದ ಮುಖ್ಯಸ್ಥರಾಗಿ, ಪ್ರಸ್ತುತ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರು 2018 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ.ವಿಶಾಲಕ್ಷಿ ಬಿ. ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಕೆಮಿಸ್ಟ್ಐ.ಸಿ.ಸಿ.) ಹಾಗೂ ದ ಸೊಸೈಟಿ ಫಾರ್ ಪಾಲಿಮರ್ ಸೈನ್ಸ್ ಇಂಡಿಯಾ (ಎಸ್.ಪಿ.ಎಸ್) ಇದರ ಆಜೀವ ಸದಸ್ಯರಾಗಿರುವ ಇವರು, ಬ್ರಹ್ಮಾವರದ ಮುತ್ತ ಸುವರ್ಣ ಮತ್ತು ನರ್ಸಿ ಕೋಟ್ಯಾನ್ ದಂಪತಿಗಳ ಪುತ್ರ. ಇವರ ಆಯ್ಕೆಗಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!