ಕುಂದಾಪುರ, ಸೆ.29: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿಯ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸುಕೇಶ್ ಚಂದ್ರಶೇಖರ ಇವರು ಮಾತನಾಡಿ, ವಾಣಿಜ್ಯ ವಿಭಾಗವು ಕೇವಲ ಲೆಕ್ಕಪತ್ರಕ್ಕೆ ಸೀಮಿತವಾಗಿಲ್ಲ. ಬ್ಯಾಂಕಿಂಗ್, ಹಣಕಾಸು, ತೆರಿಗೆ, ವಿಮೆ, ಉದ್ಯಮಶೀಲತೆ ನಿರ್ವಹಣೆ, ಡಿಜಿಟಲ್ ವಾಣಿಜ್ಯ, ಸರಕಾರಿ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶ ಒದಗಿಸುತ್ತದೆ. ಆದ್ದರಿಂದ ಸರಿಯಾದ ಶಿಕ್ಷಣ, ವೃತ್ತಿಪರ ಕೌಶಲ್ಯ , ಕಂಪ್ಯೂಟರ್ ಜ್ಞಾನ, ಸಂವಹನ ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವ ಹೊಂದಿರುವ ವಾಣಿಜ್ಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಬಹುದು ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ರವಿಚಂದ್ರ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಘಟಕ ಸಂಯೋಜಕ ಸಂದೀಪ ಕೆ ವಂದಿಸಿದರು.
ಶ್ರೀ ಶಾರದಾ ಕಾಲೇಜು ಬಸ್ರೂರು: ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
ಶ್ರೀ ಶಾರದಾ ಕಾಲೇಜು ಬಸ್ರೂರು: ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
Date:




By
ForthFocus™