Tuesday, September 29, 2026
Tuesday, September 29, 2026

ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

Date:

ಕುಂದಾಪುರ, ಸೆ.29: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ವಂಡಾರಿನ ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ವ್ಯವಸ್ಥಾಪಕ ನಿರ್ದೇಶಕರಾದ ಸಂಪತ್ ಕುಮಾರ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ತಮ್ಮ ಉದ್ಯಮದ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕುರಿತು ಉತ್ತಮವಾದಂತಹ ಕನಸನ್ನು ಕಾಣಬೇಕು, ಆ ಕನಸುಗಳನ್ನು ಪುಸ್ತಕದ ರೂಪದಲ್ಲಿ ಬರೆದಿಡಬೇಕು, ನಂತರ ಆ ಕನಸು ನನಸಾಗುವತ್ತ, ತಮ್ಮ ಗುರಿಯನ್ನು ಸಾಧಿಸುವತ್ತ ಅನವರತ ಪ್ರಯತ್ನವನ್ನು ಮಾಡಬೇಕು ಎಂದರು. ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಹಂಬಲಿಸದೆ, ಸ್ವಂತ ಉದ್ಯಮಿಗಳಾಗಿ ಬೆಳೆಯುವತ್ತ ವಿಶೇಷವಾದ ಗಮನವನ್ನು ಹರಿಸಬೇಕು ಎಂಬುವುದಾಗಿ ಮಾರ್ಗದರ್ಶನ ನೀಡಿದರು.

ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಹಾಗೂ ಪ್ರಾಧ್ಯಾಪಕರಾದ ರವಿನಂದನ್ ಭಟ್ ಇವರು ಉಪಸ್ಥಿತರಿದ್ದರು. ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿಗಳು ಈ ಕೈಗಾರಿಕಾ ಭೇಟಿಯ ಪ್ರಯೋಜನವನ್ನು ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!