Tuesday, October 20, 2026
Tuesday, October 20, 2026

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

Date:

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿಯ ಪ್ರಾಂಶುಪಾಲರಾದ ಡಾ.ನಿಕೇತನ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು, ಸಾಮಾನ್ಯ ವಿದ್ಯಾರ್ಥಿಗಳನ್ನು ಅಸಾಮಾನ್ಯ ಪ್ರತಿಭೆಗಳನ್ನಾಗಿ ರೂಪಿಸುವಲ್ಲಿ ಎನ್.ಎನ್.ಎಸ್ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ದೇಶದ ಸತ್ಪ್ರಜೆಗಳಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಎನ್.ಎಸ್. ಎಸ್. ದಿನದ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಿ ಅಭಿನಂದಿಸಲಾಯಿತು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಮತ್ತು ಕಾಲೇಜಿನ ಉಪ ಪ್ರಾಂಶುಪಾಲರಾದ ರವಿ ಜಿ ಇವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ ಸೇವಕಿಯರು ಎನ್.ಎಸ್.ಎಸ್ ಗೀತೆಗೆ ದನಿಯಾದರು. ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!