ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ರೋಟರಿ ಕ್ಲಬ್ ಕುಂದಾಪುರ ಮತ್ತು ಪಾರ್ವತಿ ಶೆಟ್ಟಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಪಾರ್ವತಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕುಂದಾಪುರದ ಖ್ಯಾತ ವಕೀಲ ಟಿ.ಬಿ. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ಉಪಾಧ್ಯಕ್ಷ ಮನೋಜ್ ನಾಯರ್, ಕಾರ್ಯದರ್ಶಿ ಅಶೋಕ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್ ನಾವುಂದ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಮುಂತಾದವರು ಉಪಸ್ಥಿತರಿದ್ದರು.
ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
Date:




By
ForthFocus™