Thursday, October 1, 2026
Thursday, October 1, 2026

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

Date:

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಅಪಾರವಾದುದು ಎಂದು ಕಟ್ಕೇರಿ ಅರಣ್ಯ ಗುತ್ತಿಗೆದಾರರಾದ ಜಯಪ್ರಕಾಶ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ವೆಂಕಟರಮಣ ಬಿ., ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರು ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಲು ಸಹಕರಿಸುವಂತೆ ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರೂಪೇಶ್ ತೃತೀಯ ಬಿ.ಕಾಂ., ಉಪಾಧ್ಯಕ್ಷರುಗಳಾದ ಅನನ್ಯ ತೃತೀಯ ಬಿ.ಸಿ.ಎ., ನಾಗರತ್ನ ತೃತೀಯ ಬಿ.ಬಿ.ಎ., ಕಾರ್ಯದರ್ಶಿಯಾದ ಅನುಷ್ ತೃತೀಯ ಬಿ.ಎ., ಜಂಟಿ ಕಾರ್ಯದರ್ಶಿಗಳಾದ ಜಯಕರ ತೃತೀಯ ಬಿ.ಎಸ್ಸಿ. ಮತ್ತು ಸ್ನಾತಕೋತ್ತರ ವಿಭಾಗದ ಪ್ರತಿನಿಧಿಯಾಗಿ ಅಮೃತಾ ಅವರನ್ನು ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ಸುಬ್ರಮಣ್ಯ ಎ ಸ್ವಾಗತಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿ ಕೀರ್ತನಾ ವಂದಿಸಿದರು. ರಂಜಿತಾ ಮತ್ತು ತಂಡದವರು ಪ್ರಾರ್ಥಿಸಿದರು. ತೃತೀಯ ಬಿ.ಕಾಂ. ಸುಚೇತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...
error: Content is protected !!