ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು.
ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಿಗೆ ತಲುಪಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ:1077, ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.