Wednesday, September 30, 2026
Wednesday, September 30, 2026

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

Date:

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ವಿಶೇಷ ಪ್ಯಾಕೇಜ್ ಪ್ರವಾಸ ಕಾರ‍್ಯಾಚರಣೆಯನ್ನು ಅಕ್ಟೋಬರ್ 11 ರಿಂದ 20 ರ ವರೆಗೆ ಕಾರ‍್ಯಚರಿಸಲು ಯೋಜಿಸಲಾಗಿದೆ.

ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರದ ವಿವರ: ಪ್ಯಾಕೇಜ್ ಪ್ರವಾಸದ ಮಾರ್ಗದ ಬಸ್‌ಗಳು ಬೆಳಗ್ಗೆ 7.30 ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು ಶ್ರೀ ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ- ಶೃಂಗೇರಿ ಶ್ರೀ ಶಾರದಾಂಬ ದೇವಸ್ಥಾನ, ವಯಾ ಎಸ್.ಕೆ.ಬಾರ್ಡರ್, ಶ್ರೀ. ಋಷ್ಯಶೃಂಗೇಶ್ವರ ದೇವಸ್ಥಾನ, ಕಿಗ್ಗ ಕ್ಷೇತ್ರ- ಹರಿಹರಪುರ ಮಠ-ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ರಾತ್ರಿ 8 ಗಂಟೆಗೆ ಉಡುಪಿ ನಗರ ಸಾರಿಗೆ ಬಸ್ಸು ನಿಲ್ದಾಣ ತಲುಪಲಿದೆ.

ಪ್ಯಾಕೇಜ್ ಪ್ರವಾಸದ ಮತ್ತೊಂದು ಮಾರ್ಗದ ಬಸ್‌ಗಳು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಬೆಳಗ್ಗೆ 7.30 ಕ್ಕೆ ಹೊರಟು ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನವನ್ನು ಸಂದರ್ಶಿಸಿ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಂಜೆ 6.30 ಕ್ಕೆ ಬಂದು ತಲುಪಲಿದೆ.

ಎರಡು ಮಾರ್ಗಗಳ ಪ್ಯಾಕೇಜ್ ಪ್ರವಾಸಕ್ಕೆ ವಯಸ್ಕರಿಗೆ ರೂ.500 ಹಾಗೂ ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.400 ದರ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ ಘಟಕ ವ್ಯವಸ್ಥಾಪಕರು ದೂ.ಸಂಖ್ಯೆ: 7760995407, ಉಡುಪಿ ಘಟಕ– ದೂ.ಸಂಖ್ಯೆ: 7760994451, ಉಡುಪಿ ಮುಂಗಡ ಬುಕ್ಕಿಂಗ್ ಕೌಂಟರ್ ದೂ.ಸಂಖ್ಯೆ: 9663266400 ಹಾಗೂ ಸದರಿ ಪ್ಯಾಕೇಜ್ ಪ್ರವಾಸಕ್ಕೆ ಮುಂಗಡ ಆಸನ ಕಾಯ್ದಿರಿಸಲು http://www.ksrtc.in ನ ವ್ಯವಸ್ಥೆ ಮಾಡಲಾಗಿದ್ದು, ಸದರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳಬಹುದಾಗಿದೆ ಎಂದು ಮಂಗಳೂರು ಕ.ರಾ.ರ.ಸಾ.ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...
error: Content is protected !!