Saturday, November 21, 2026
Saturday, November 21, 2026

ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

Date:

ಉಡುಪಿ, ಅ.1: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ ವತಿಯಿಂದ ನೀಡಲಾಗುವ ಅನುದಾನ ರಹಿತ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಉಪನ್ಯಾಸಕರು ಆಯ್ಕೆಯಾಗಿದ್ದಾರೆ. ಉಡುಪಿಯ ಹೋಟೆಲ್ ಓಷನ್ ಪರ್ಲ್‌ನಲ್ಲಿ ನಡೆದ ಉಡುಪಿ ಜಿಲ್ಲಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಉಪನ್ಯಾಸಕರ ವೃತ್ತಿಪರ ಅನುಭವ, ಬೋಧನಾ ಕ್ಷೇತ್ರದಲ್ಲಿನ ಕೊಡುಗೆ, ಪ್ರತಿಭೆ ಹಾಗೂ ಸೇವೆಯನ್ನು ಪರಿಗಣಿಸಿ ಐವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದವರು: ರೇಷ್ಮಾ ಫರ್ನಾಂಡೀಸ್ – ಸೆಂಟ್ ಮೇರೀಸ್ ಕಾಂಪೋಸಿಟ್ ಪದವಿಪೂರ್ವ ಕಾಲೇಜು, ಕುಂದಾಪುರ, ಸ್ಮಿತಾ ಪದ್ಮಜಾ – ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುನ್ನಾರಿ, ಸೌಜನ್ಯಾ ಹೆಗ್ಡೆ – ಜ್ಞಾನಸುಧಾ ಶಿಕ್ಷಣ ಸಂಸ್ಥೆ, ಕಾರ್ಕಳ, ಶಕುಂತಲಾ ಪಾಲನ್-ವಿದ್ಯೋದಯ ಶಿಕ್ಷಣ ಸಂಸ್ಥೆ ಉಡುಪಿ, ಲತಾ ಪೈ -ವೆಂಕಟರಮಣ ಶಿಕ್ಷಣ ಸಂಸ್ಥೆ ಕುಂದಾಪುರ

ಆಯ್ಕೆಯಾದ ಉಪನ್ಯಾಸಕರಿಗೆ ಅಕ್ಟೋಬರ್ 3ರಂದು ಸಂಜೆ 4 ಗಂಟೆಗೆ ಮಣಿಪಾಲದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ರವೀಂದ್ರ ಉಪಾಧ್ಯಯ, ಕೆ.ಯು.ಪಿ. ಎಂ.ಎ ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.

ಕೆ.ಯು.ಪಿ.ಎಂ.ಎ ರಾಜ್ಯ ಸಮಿತಿಯ ನಿರ್ದೇಶನದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತ್ಯುತ್ತಮ ಉಪನ್ಯಾಸಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಉಡುಪಿ ಜಿಲ್ಲಾ ಕೆ.ಯು.ಪಿ.ಎಂ.ಎ ಸಮಿತಿಯಿಂದ ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರತಿವರ್ಷವೂ ಈ ಪ್ರಶಸ್ತಿ ಪ್ರದಾನ ಮುಂದುವರಿಯಲಿದೆ ಎಂದು ಕೆ.ಯು.ಪಿ.ಎಂ.ಎ ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸಿ.ಎ. ಗೋಪಾಲಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಅಶ್ವತ್ ಎಸ್.ಎಲ್. ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ, ನ.21: ಗಂಗೊಳ್ಳಿಯ ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ...

ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ನ.21: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್...

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

ಉಡುಪಿ, ನ.21: ಕೇಂದ್ರ ಸರ್ಕಾರದ ಎಂ.ಎಸ್.ಎA.ಇ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ...

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

ಉಡುಪಿ, ನ.21: ಹರಿಖಂಡಿಗೆಯ ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ...
error: Content is protected !!