Thursday, October 1, 2026
Thursday, October 1, 2026

ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಯ ಮೂಲ ಸೌಕರ್ಯಗಳ ಬಲವರ್ಧನೆಗೆ ರೂ. 15 ಕೋಟಿ ವಿಶೇಷ ಅನುದಾನ ನೀಡಲು ಇಂಧನ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಯ ಮೂಲ ಸೌಕರ್ಯಗಳ ಬಲವರ್ಧನೆಗೆ ರೂ. 15 ಕೋಟಿ ವಿಶೇಷ ಅನುದಾನ ನೀಡಲು ಇಂಧನ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಅ.1: ಉಡುಪಿ ವಿಧಾನಸಭಾ ಕ್ಷೇತ್ರವು ಜಿಲ್ಲಾ ಕೇಂದ್ರವಾಗಿದ್ದು, ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರೀಕರಣ, ಹೊಸ ಬಡಾವಣೆಗಳ ನಿರ್ಮಾಣ ಹಾಗೂ ವಾಣಿಜ್ಯ ಚಟುವಟಿಕೆಗಳ ವಿಸ್ತರಣೆಯಿಂದ ವಿದ್ಯುತ್ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಆದರೆ ಹಲವು ಪ್ರದೇಶಗಳಲ್ಲಿ ಕಡಿಮೆ ವೋಲ್ಟೇಜ್, ವಿದ್ಯುತ್ ವ್ಯತ್ಯಯ ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ಮೇಲಿನ ಹೆಚ್ಚಿನ ಒತ್ತಡದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಯ ನಿಟ್ಟಿನಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಸಮಗ್ರವಾಗಿ ಬಲಪಡಿಸಲು ಮೆಸ್ಕಾಂಗೆ ರೂ.15 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕ ಯಶ್ ಪಾಲ್ ಸುವರ್ಣ ರವರು ಇಂಧನ ಸಚಿವರಿಗೆ ಮನವಿ ಮಾಡಿದ್ದಾರೆ.

ಅನುದಾನದ ಮೂಲಕ ಅಗತ್ಯವಿರುವ ಕಡೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವುದು, ಹಾಲಿ ಟ್ರಾನ್ಸ್‌ಫಾರ್ಮರ್‌ಗಳ ಸಾಮರ್ಥ್ಯ ಹೆಚ್ಚಿಸುವುದು, ಹಳೆಯ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಹೊಸ ಕೇಬಲ್ ಮತ್ತು ವಿತರಣಾ ಮಾರ್ಗಗಳನ್ನು ನಿರ್ಮಿಸುವ ಅಗತ್ಯವಿದೆ.

ಅದೇ ರೀತಿ ವಿದ್ಯುತ್ ಬೇಡಿಕೆ ಹೆಚ್ಚಿರುವ ಪ್ರದೇಶಗಳಲ್ಲಿ ಹೊಸ ಸಬ್‌ಸ್ಟೇಷನ್‌ಗಳನ್ನು ನಿರ್ಮಿಸುವುದು ಹಾಗೂ ಹಾಲಿ ಸಬ್‌ಸ್ಟೇಷನ್‌ಗಳನ್ನು ಮೇಲ್ದರ್ಜೆಗೇರಿಸುವುದು, ಕಡಿಮೆ ವೋಲ್ಟೇಜ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಮತ್ತು ವೇಗವಾಗಿ ಬೆಳೆಯುತ್ತಿರುವ ಹೊಸ ಬಡಾವಣೆಗಳಿಗೆ ಅಗತ್ಯ ವಿದ್ಯುತ್ ಮೂಲಸೌಕರ್ಯ ಒದಗಿಸುವುದು ಪ್ರಮುಖ ಆದ್ಯತೆಯಾಗಬೇಕು. ಪ್ರಮುಖ ರಸ್ತೆ ಹಾಗೂ ಜಂಕ್ಷನ್‌ಗಳಲ್ಲಿ ರಸ್ತೆ ದೀಪ ಮತ್ತು ಹೈಮಾಸ್ಟ್ ದೀಪಗಳ ವ್ಯವಸ್ಥೆಯನ್ನು ಕೂಡ ಬಲಪಡಿಸಬೇಕಾಗಿದೆ.

ಉಡುಪಿ ನಗರವು ಜಿಲ್ಲಾ ಕೇಂದ್ರವಾಗಿರುವುದರಿಂದ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಅತ್ಯಂತ ಅವಶ್ಯಕವಾಗಿದೆ. ಕ್ಷೇತ್ರದ ಪ್ರಸ್ತುತ ಹಾಗೂ ಮುಂದಿನ ಹಲವು ವರ್ಷಗಳ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೆಸ್ಕಾಂಗೆ ರೂ.15 ಕೋಟಿ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಶಾಸಕ ಯಶ್ಪಾಲ್ ಸುವರ್ಣ ಅವರು ಇಂಧನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

ಉಡುಪಿ, ಅ.1: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ...

ಜಾನುವಾರು ಪ್ರದರ್ಶನಕ್ಕೆ ಚಾಲನೆ

ಧಾರವಾಡ, ಅ.1: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದ...
error: Content is protected !!