Saturday, October 3, 2026
Saturday, October 3, 2026

ಉಡುಪಿ ನಗರಸಭೆ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರಾತಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರಾತಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಅ.2: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಗತ್ಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ಜಿಲ್ಲಾ ಕೇಂದ್ರವಾಗಿರುವ ಉಡುಪಿ ನಗರವು ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ, ಬ್ಯಾಂಕಿಂಗ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯಗಳ ಮೇಲಿನ ಒತ್ತಡ ಹೆಚ್ಚಾಗಿದೆ.

ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ, ರಸ್ತೆ ನಿರ್ವಹಣೆ, ಚರಂಡಿ ಹಾಗೂ ಮಳೆನೀರು ಹರಿಯುವ ವ್ಯವಸ್ಥೆ, ಕಾಲುಸಂಕ, ತಡೆಗೋಡೆ, ದಾರಿದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ವಿಶೇಷವಾಗಿ ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ತಡೆಗೋಡೆ ಮತ್ತು ಕಾಲುಸಂಕಗಳನ್ನು ನಿರ್ಮಿಸುವುದು ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಅವಶ್ಯಕವಾಗಿದೆ.

ಉಡುಪಿ ನಗರವು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನಸಂಖ್ಯೆ ಮತ್ತು ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೀಮಿತ ಅನುದಾನದಲ್ಲಿ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಕರವಾಗಿದೆ. ಸಾರ್ವಜನಿಕರಿಂದಲೂ ವಿವಿಧ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಿರಂತರವಾಗಿ ಬೇಡಿಕೆಗಳು ಬರುತ್ತಿರುವುದರಿಂದ, ನಗರದ ಅಗತ್ಯತೆಗಳನ್ನು ಆದ್ಯತೆಯ ಆಧಾರದ ಮೇಲೆ ಪರಿಹರಿಸಲು ವಿಶೇಷ ಅನುದಾನದ ಅಗತ್ಯವಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕನಿಷ್ಠ ರೂ.30 ಕೋಟಿ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಉಡುಪಿ ನಗರದ ಮೂಲಸೌಕರ್ಯವನ್ನು ಬಲಪಡಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...
error: Content is protected !!