Sunday, November 8, 2026
Sunday, November 8, 2026

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

Date:

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್ ಎಲ್., ಡಾ.ಗಣನಾಥ್ ಶೆಟ್ಟಿ ಬಿ., ಗಣಪತಿ ಭಟ್ ಕೆ ಎಸ್ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಚ್ಛತೆಯ ತತ್ವಗಳು ಇಂದಿಗೂ ಪ್ರಸ್ತುತ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಚಳುವಳಿಗೆ ಹೊಸ ಅರ್ಥವನ್ನು ತಂದುಕೊಟ್ಟಿದ್ದರು. ಎಲ್ಲರೂ ಗೌರವಿಸುವ ಮತ್ತು ಪ್ರೀತಿಸುವ ಮಹಾಚೇತನ. ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಸರಳತೆ ಮತ್ತು ಆಡಳಿತ ವೈಖರಿ ಎಲ್ಲ ಕಾಲಕ್ಕೂ ಅನುಕರಣೀಯ ಎಂದು ಹೇಳಿದರು. ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು, ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಹೆದ್ದಾರಿ-66 ನಿರಂತರ ಅಪಘಾತ ಸಮಸ್ಯೆ: ಬೆಂಗಳೂರಿನ ಆರ್.ಓ ಕಚೇರಿಯಲ್ಲಿ ತುರ್ತು ಸಭೆ

ಉಡುಪಿ, ನ.8: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೆಜಮಾಡಿಯಿಂದ ಬೈಂದೂರು ವರೆಗಿನ ನಿರಂತರ ಅಪಘಾತಗಳು...

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜಲಪೂರಣ, ತೈಲಾಭ್ಯಂಜನ ಕಾರ್ಯಕ್ರಮ

ಉಡುಪಿ, ನ.8: ನರಕ ಚತುರ್ದಶಿ ಮುನ್ನಾದಿನ ಜಲಪೂರಣ ಕಾರ್ಯಕ್ರಮ ಸಾಂಪ್ರದಾಯಿಕ ರೀತಿಯಲ್ಲಿ...
error: Content is protected !!