ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಮೂಡಿಸುವ ಉದ್ದೇಶದಿಂದ ಮೂಟ್ ಕೋರ್ಟ್ ಮಾದರಿಯ ಅಂತರ್ ತರಗತಿ ಕಾನೂನು ಸ್ಪರ್ಧೆ ʼವಿಧಿಕ್ತ–2026ʼವನ್ನು ಮೂಕಾಂಬಿಕ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾನೂನಿನ ಅರಿವು ಕೇವಲ ನ್ಯಾಯಾಲಯಕ್ಕೆ ಮಾತ್ರ ಸೀಮಿತವಾಗಿರದೆ, ದೈನಂದಿನ ಜೀವನದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ಬೆಳೆಸಿಕೊಳ್ಳುವುದರಿಂದ ತಮ್ಮ ಜೀವನದಲ್ಲಿ ಅಮೂಲ್ಯವಾದ ಪಾಠಗಳನ್ನು ಕಲಿಯಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ಪರ್ಧೆಯ ತೀರ್ಪುಗಾರರಾಗಿ ಉಡುಪಿ ಬಾರ್ ಅಸೋಸಿಯೇಷನ್‌ನ ವಕೀಲರಾದ ಪ್ರಸಾದಿ ಎಸ್. ಸುವರ್ಣ, ಪವರ್ ಟಿವಿ ನ್ಯೂಸ್ ನಿರೂಪಕರಾದ ಪ್ರಣುತ್ ಆರ್. ಗಾಣಿಗ ಹಾಗೂ ಪ್ರಾಕ್ತನ ವಿದ್ಯಾರ್ಥಿನಿ ವಕೀಲೆ ನಾಗರತ್ನ, ವಿ-ರೀಚ್ ಅಕಾಡೆಮಿಯ ಕಾನೂನು ಸಲಹೆಗಾರ ಜೀವನ್ ಲ್ಯಾನ್ಸಿ ಫೆರೇರಾ ಹಾಗೂ ಕಾರ್ಯಕ್ರಮದ ಸಂಯೋಜಕರಾಗಿ ಕಿಶೋರ್ ಕೃಷ್ಣ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಪ್ರೀತಿ ಹೆಗ್ಡೆ ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ಮನೀಶಾ ಪ್ರಾರ್ಥಿಸಿದರು.
ವಿಧಿಕ್ತ–2026 ಉದ್ಘಾಟನೆ
ವಿಧಿಕ್ತ–2026 ಉದ್ಘಾಟನೆ
Date:




By
ForthFocus™