ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಐ.ಪಿ.ಎಸ್ ಇವರು ಪತ್ನಿ ಡಾ. ಶಾಲಿನಿ ಮತ್ತು ಪುತ್ರನೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಸಮಿತಿಯಿಂದ ನೂತನ ದೇಗುಲ ನಿರ್ಮಾಣವಾದ ಬಗ್ಗೆ ಮತ್ತು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿವರಿಸಲಾಯಿತು, ದೇವಸ್ಥಾನದ ವಾಸ್ತುಶಿಲ್ಪ ಮತ್ತು ಸ್ವಚ್ಛತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ನಿ ಡಾ. ಶಾಲಿನಿ ಗುಪ್ತ ನವದುರ್ಗಾ ಲೇಖನ ಯಜ್ಞ ಮತ್ತು ಶಾಶ್ವತ ಸೇವೆಯ ಮಾಹಿತಿಯನ್ನು ಪಡೆದು, ತಾನು ಕೂಡಾ ಮನೆಯಲ್ಲಿ 9 ದಿನಗಳವರೆಗೆ ಬರೆಯುವುದಾಗಿ ಲೇಖನ ಪುಸ್ತಕವನ್ನು ಪಡೆದುಕೊಂಡರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ ಹೆಗ್ಡೆ ಕಲ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™