Tuesday, October 6, 2026
Tuesday, October 6, 2026

ತೆಂಕನಿಡಿಯೂರು ಕಾಲೇಜು: ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ; ಸರ್ವ ಧರ್ಮ ಪ್ರಾರ್ಥನೆ

ತೆಂಕನಿಡಿಯೂರು ಕಾಲೇಜು: ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ; ಸರ್ವ ಧರ್ಮ ಪ್ರಾರ್ಥನೆ

Date:

ಉಡುಪಿ, ಅ.5: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ರೋವರ್ಸ್ ಮತ್ತು ರೇಂಜರ್ಸ್, ಎನ್.ಎಸ್.ಎಸ್., ಯುವ ರೆಡ್ ಕ್ರಾಸ್ ಘಟಕ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಕರ್ತವ್ಯನಿಷ್ಠೆಯ ಮೌಲ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿವಿಧ ಧರ್ಮಗಳ ಸಾರವನ್ನು ಸಾರುವ ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ರಘು ನಾಯ್ಕ್, ಸಹ ಪ್ರಾಧ್ಯಾಪಕರಾದ ಉಮೇಶ್ ಪೈ ಮತ್ತು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ರೋವರ್ ಸ್ಕೌಟ್ ಲೀಡರ್ ಮರ್ವಿನ್ ಡಿಸೋಜ, ರೇಂಜರ್ ಲೀಡರ್ ಸುಷ್ಮಾ ಟಿ, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಬಾಲರಾಜ್ ಡಿ ಬಿ ಮತ್ತು ಡಾ. ಜಯಮಂಗಳ ಕಾರ್ಯಕ್ರಮ ಸಂಯೋಜಿಸಿದರು. ಕಾಲೇಜಿನ ಉಪನ್ಯಾಸಕ ವೃಂದ, ಎನ್.ಎಸ್.ಎಸ್., ರೋವರ್ಸ್-ರೇಂಜರ್ಸ್, ಯುವ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ತರಗತಿ ಮತ್ತು ಸುತ್ತಮುತ್ತ ಸ್ವಚ್ಛತೆ ಕಾರ್ಯ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!