Thursday, October 8, 2026
Thursday, October 8, 2026

ಕನ್ಯಾಬಲಿ ಕಾರಂತರ ಪ್ರಾತಿನಿಧಿಕ ಕಾದಂಬರಿ: ಶಾಲಿನಿ ಯು.ಬಿ

ಕನ್ಯಾಬಲಿ ಕಾರಂತರ ಪ್ರಾತಿನಿಧಿಕ ಕಾದಂಬರಿ: ಶಾಲಿನಿ ಯು.ಬಿ

Date:

ಉಡುಪಿ, ಅ.6: ಹೆಣ್ಣಿನ ಬದುಕನ್ನು ನಿಯಂತ್ರಿಸುವ ಸಾಮಾಜಿಕ ಸಂಪ್ರದಾಯಗಳು ವಿಧವಾ ಪದ್ಧತಿ ಪುರುಷಾಧಿಪತ್ಯ, ವಿವಾಹದ ಕುರಿತಾದ ಏಕಮುಖ ನೈತಿಕತೆ ಮತ್ತು ಆರ್ಥಿಕ ಅಸಹಾಯಕತೆಯ ಪರಿಣಾಮವಾಗಿ ರೂಪುಗೊಂಡ ಸಾಮಾಜಿಕ ದುರಂತಗಳನ್ನು ವಿರೋಧಿಸಿ ಹೆಣ್ಣಿನ ಸಮಾನತೆ ಹಕ್ಕನ್ನು ಒತ್ತಿ ಹೇಳುವ ಕನ್ಯಾಬಲಿಯು ಕಾರಂತರ ಪ್ರಾತಿನಿಧಿಕ ಕಾದಂಬರಿ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶಾಲಿನಿ ಯು.ಬಿ ಹೇಳಿದರು.

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕೋಟೇಶ್ವರ ಇಲ್ಲಿ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-೧೮ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಸುಬ್ಮಹ್ಮಣ್ಯ ಅವರು ಕಾರಂತರ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅಗತ್ಯವಾಗಿದೆ. ಸಾಹಿತ್ಯದ ಕಡೆಗೆ ವಿದ್ಯಾರ್ಥಿಗಳಿಗೆ ಅಭಿರುಚಿಯನ್ನು ಬೆಳೆಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಕಾರಂತರ ವಿಚಾರಗಳನ್ನು ಓದಿಕೊಂಡು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಕಾರಂತರ ಕೃತಿಗಳು ವೈಚಾರಿಕ ಮತ್ತು ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳನ್ನು ಕಾರಂತರ ಕುರಿತು ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದರು. ಕನ್ನಡ ಉಪನ್ಯಾಸಕಿ ಭಾರತಿ ಸ್ವಾಗತಿಸಿ, ಪ್ರೇಮಾಲಾಕ್ಷಿ ನಿರೂಪಿಸಿ, ರಂಜಿತ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಂಥಾಲಯದಲ್ಲಿ ನಮ್ಮ ಸಾಹಿತಿ

ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ,...

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ

ಉಡುಪಿ, ಅ.7: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ...

ರಂಗ ಅಧ್ಯಯನ ಕೇಂದ್ರ ಉದ್ಘಾಟನೆ

ಬಸ್ರೂರು, ಅ.7: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶಾರದಾ ರಂಗ...
error: Content is protected !!