ಉಡುಪಿ, ಅ.6: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮನೆಯೇ ‘ಗ್ರಂಥಾಲಯ ಅಭಿಯಾನದ ಅಂಗವಾಗಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ., ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು, ಉಡುಪಿ ಪ್ರಭಾರ ಪ್ರಾಂಶುಪಾಲೆ ಡಾ. ಉಷಾ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶುಭಗೀತಾ, ಸಾಹಿತಿ ಸುಧಾ ಆಡುಕಳ, ಪದಾಧಿಕಾರಿಗಳಾದ ಸತೀಶ್ ಕೊಡವೂರು, ರಂಜನಿ ವಸಂತ್, ದೀಪಾ ಚಂದ್ರಕಾಂತ್, ಮನೆಯೇ ಗ್ರಂಥಾಲಯ ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.
ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ
ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ
Date:




By
ForthFocus™